Select Your Language

Notifications

webdunia
webdunia
webdunia
webdunia

ಹಿಂದೂ ಧಾರ್ಮಿಕ ಭಾವನೆಗಳಿಗೆ ಧಕ್ಕೆ: ಜಗನ್ ಮೋಹನ್ ರೆಡ್ಡಿ ವಿರುದ್ಧ ದೂರು

Jagan Mohan Reddy

Sampriya

ಹೈದರಾಬಾದ್ , ಶನಿವಾರ, 21 ಸೆಪ್ಟಂಬರ್ 2024 (22:34 IST)
Photo Courtesy X
ಹೈದರಾಬಾದ್‌: ತಿರುಪತಿ ಲಡ್ಡು ತಯಾರು ಮಾಡುವ ತುಪ್ಪದಲ್ಲಿ ಹಂದಿ, ದನದ ಕೊಬ್ಬು, ಮೀನಿನ ಎಣ್ಣೆ ಬಳಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಆಂಧ್ರ ಪ್ರದೇಶ ಮಾಜಿ ಮುಖ್ಯಮಂತ್ರಿ ವೈಎಸ್ ಜಗನ್ ಮೋಹನ್ ರೆಡ್ಡಿ ಮತ್ತು ಇತರರ ವಿರುದ್ಧ ಹೈದರಾಬಾದ್‌ನಲ್ಲಿ ದೂರು ದಾಖಲಾಗಿದೆ.

ವಕೀಲರೊಬ್ಬರು ನೀಡಿದ ದೂರಿನ ಅನ್ವಯ ಜಗನ್ ಮೋಹನ್ ರೆಡ್ಡಿ ವಿರುದ್ಧ ಪ್ರಕರಣ ದಾಖಲಾಗಿದೆ. ಶ್ರೀ  "ದುರುದ್ದೇಶಪೂರಿತ ಕೃತ್ಯಗಳ" ಮೂಲಕ ಹಾಳು ಮಾಡಿದ ಮತ್ತು ಹಿಂದೂ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದಿರುವ ಆರೋಪದ ಮೇಲೆ ಜಗನ್ ವಿರುದ್ಧ ದೂರು ದಾಖಲಾಗಿದೆ.

ವಿಶ್ವವಿಖ್ಯಾತ ತಿರುಪತಿ ಲಡ್ಡು ತಯಾರಿಕೆಯಲ್ಲಿ ಗುಣಮಟ್ಟವಿಲ್ಲದ ಪದಾರ್ಥಗಳು ಮತ್ತು ಪ್ರಾಣಿಗಳ ಕೊಬ್ಬನ್ನು ಬಳಸಲಾಗುತ್ತಿದೆ ಎಂದು ಸ್ವತಃ ಆಂಧ್ರ ಪ್ರದೇಶ ಮುಖ್ಯಮಂತ್ರಿ ಆರೋಪ ಮಾಡಿದ್ದರು. ಇದು ದೇಶವನ್ನೇ ಬೆಚ್ಚಿಬೀಳಿಸಿದೆ.

ಅಲ್ಲದೆ ತಿರುಪತಿ ಲಡ್ಡುವಿನಲ್ಲಿ ದನದ ಕೊಬ್ಬು, ಮೀನಿನ ಎಣ್ಣೆ ಬಳಸಿರುವುದು ಲ್ಯಾಬ್ ವರದಿಯಲ್ಲಿ ದೃಢಪಟ್ಟಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ನಾಗಮಂಗಲ ಗಲಭೆ, ಬಂಧನ ಭೀತಿಯಲ್ಲಿದ್ದ ಯುವಕ ಸಾವು