Publish Date: Mon, 20 Jun 2022 (14:01 IST)
Updated Date: Mon, 20 Jun 2022 (14:27 IST)
ನವದೆಹಲಿ : ತರಕಾರಿ ಕತ್ತರಿಸುವ ಇಳಿಗೆಮಣೆಯಿಂದ ಪತ್ನಿ ಮೇಲೆ ಹಲ್ಲೆ ನಡೆಸಿದ್ದ ವ್ಯಕ್ತಿಯೋರ್ವನನ್ನು ಪೊಲೀಸರು ಬಂಧಿಸಿದ್ದಾರೆ.
ದೆಹಲಿಯ ನೆಹರು ವಿಹಾರ್ನಲ್ಲಿ ಈ ಘಟನೆ ನಡೆದಿದ್ದು, ಭಾನುವಾರ ಮುಂಜಾನೆ 3.40ರ ಸುಮಾರಿಗೆ ದಯಾಲ್ಪುರ ಪೊಲೀಸ್ ಠಾಣೆಗೆ ಈ ಘಟನೆ ಕುರಿತಂತೆ ಮಾಹಿತಿ ದೊರೆತಿದೆ. ಪತಿಯಿಂದ ಹಲ್ಲೆಗೊಳಗಾದ ಮಹಿಳೆ ತೀವ್ರವಾಗಿ ಗಾಯಗೊಂಡಿದ್ದಾರೆ.
ನಂತರ ಸ್ಥಳಕ್ಕೆ ಆಗಮಿಸಿದ ಪೊಲೀಸರು ಗಾಯಗೊಂಡ ಮಹಿಳೆಯನ್ನು ಗುರು ತೇಗ್ ಬಹದ್ದೂರ್ (ಜಿಟಿಬಿ) ಆಸ್ಪತ್ರೆಗೆ ದಾಖಲಿಸಿದ್ದಾರೆ. ಘಟನೆ ವೇಳೆ ಮಹಿಳೆ ತಲೆಗೆ ಗಂಭೀರವಾಗಿ ಪೆಟ್ಟು ಬಿದ್ದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ದಂಪತಿಯ ಪುತ್ರಿ ಹೇಳಿಕೆ ಆಧಾರದ ಮೇಲೆ ಇದೀಗ ಆರೋಪಿ ವಿರುದ್ಧ ದಯಾಲ್ಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ತನಿಖೆ ವೇಳೆ ಇಳಿಗೆ ಮಣೆಯಿಂದ ಹೊಡೆದಿರುವುದು ಬೆಳಕಿಗೆ ಬಂದಿದೆ.
ವಿಚಾರಣೆ ವೇಳೆ ಆರೋಪಿ ತನ್ನ ಪತ್ನಿಯೊಂದಿಗೆ ಉತ್ತಮ ಸಂಬಂಧ ಹೊಂದಿರಲಿಲ್ಲ ಮತ್ತು ಆಕೆ ಬೇರೆಯವರೊಂದಿಗೆ ಅಕ್ರಮ ಸಂಬಂಧವನ್ನು ಹೊಂದಿದ್ದಾಳೆ ಅಂತ ಶಂಕಿಸಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಇದೀಗ ಆರೋಪಿ ಈ ಕೃತ್ಯಕ್ಕೆ ಬಳಸಿದ್ದ ಇಳಿಗೆ ಮಣೆಯನ್ನು ಪೊಲೀಸರು ವಶಪಡಿಸಿಕೊಂಡಿದ್ದು, ಈ ಸಂಬಂಧ ತನಿಖೆ ನಡೆಸುತ್ತಿದ್ದಾರೆ.