Select Your Language

Notifications

webdunia
webdunia
webdunia
webdunia

ಅನೈತಿಕ ಸಂಬಂಧ ಹೊಂದಿದ್ದಾಳೆ ಎಂಬ ಅನುಮಾನದಿಂದ ಪತ್ನಿಯ ತಲೆ ಕಡಿದ ಪತಿ

ಅನೈತಿಕ ಸಂಬಂಧ ಹೊಂದಿದ್ದಾಳೆ ಎಂಬ ಅನುಮಾನದಿಂದ ಪತ್ನಿಯ ತಲೆ ಕಡಿದ ಪತಿ
ಉತ್ತರ ಪ್ರದೇಶ , ಮಂಗಳವಾರ, 12 ನವೆಂಬರ್ 2019 (06:58 IST)
ಉತ್ತರ ಪ್ರದೇಶ : ಅನೈತಿಕ ಸಂಬಂಧ ಹೊಂದಿದ್ದಾಳೆ ಎಂಬ ಅನುಮಾನದಿಂದ ಪತಿಯೊಬ್ಬ ಪತ್ನಿಯ ಶಿರಚ್ಛೇದ ಮಾಡಿ ಪೊಲೀಸರಿಗೆ ಶರಣಾದ ಘಟನೆ ಉತ್ತರ ಪ್ರದೇಶದ ಆಗ್ರಾದ ಹರಿ ಪ್ರಭಾತ್ ನಲ್ಲಿ ನಡೆದಿದೆ.




ನರೇಶ್ ಈ ಕೃತ್ಯ ಎಸಗಿದ ಆರೋಪಿಯಾಗಿದ್ದು, ಈತ ಪತ್ನಿ ಅನೈತಿಕ ಸಂಬಂಧ ಹೊಂದಿದ್ದಾಳೆ ಎಂಬ ಅನುಮಾನದಿಂದ ಆಗಾಗ ಆಕೆಯ ಜೊತೆ ಜಗಳವಾಡುತ್ತಿದ್ದ. ಈ ಜಗಳ ತಾರಕಕ್ಕೇರಿದ್ದು, ಕೋಪಗೊಂಡ ನರೇಶ್ ಪತ್ನಿಯ ತಲೆ ಕಡಿದು  ಅದನ್ನು ಒಂದು ಚೀಲದಲ್ಲಿ ಹಾಕಿಕೊಂಡು ಪೊಲೀಸ್ ಠಾಣೆಗೆ ಬಂದು ಪೊಲೀಸರಿಗೆ ಶರಣಾಗಿದ್ದಾನೆ.ಆತನನ್ನು ವಶಕ್ಕೆ ಪಡೆದ ಪೊಲೀಸರು ಆತನ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ. 


Share this Story:

Follow Webdunia kannada

ಮುಂದಿನ ಸುದ್ದಿ

ಒಂದು ರೂಪಾಯಿಗೆ ಒಂದು ಕೆಜಿ ಮೀನನ್ನು ಮಾರಾಟ ಮಾಡಿದ ವ್ಯಾಪಾರಿ!