ಭುವನೇಶ್ವರ್ : 37 ವರ್ಷದ ವ್ಯಕ್ತಿಯೊಬ್ಬ ತನ್ನ ವಿವಾಹೇತರ ಸಂಬಂಧದ ಬಗ್ಗೆ ತಿಳಿದುಕೊಂಡ ಪತ್ನಿಯನ್ನು ಸುಪಾರಿ ಕೊಟ್ಟು ಕೊಲೆ ಮಾಡಿಸಿದ ಘಟನೆ ಒಡಿಶಾದ ನಾಯಗರ್ ಜಿಲ್ಲೆಯಲ್ಲಿ ನಡೆದಿದೆ.
ಆರೋಪಿಗೆ ಮದುವೆಯಾಗಿದ್ದರೂ ಕೂಡ ಬೇರೆ ಮಹಿಳೆಯ ಜೊತೆ ಸಂಬಂಧವಿಟ್ಟುಕೊಂಡಿದ್ದ. ಈ ವಿಚಾರವನ್ನು ಪತ್ನಿ ಕಂಡುಹಿಡಿದಿದ್ದಾಳೆ. ಹಾಗಾಗಿ ಪತಿ ಕೊಲೆಗಾರನಿಗೆ 1ಲಕ್ಷರೂ. ನೀಡಿ ಪತ್ನಿಯನ್ನು ಕೊಲೆ ಮಾಡುವುದಾಗಿ ಸುಪಾರಿ ನೀಡಿದ್ದಾನೆ, ಅದರಂತೆ ಕೊಲೆಗಾರರು ಆಕೆ ಮನೆಯಲ್ಲಿ ಒಬ್ಬಂಟಿಯಾಗಿರುವ ವೇಳೆ ಮನೆಗೆ ನುಗ್ಗಿ ಕತ್ತು ಹಿಸುಕಿ ಕೊಂದು ಆತ್ಮಹತ್ಯೆ ಎಂದು ಬಿಂಬಿಸಲು ನೇಣು ಹಾಕಿದ್ದಾರೆ.
ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಇದು ಕೊಲೆ ಎಂಬುದು ತಿಳಿದುಬಂದ ಹಿನ್ನಲೆಯಲ್ಲಿ ತನಿಖೆ ನಡೆಸಿ ಆರೋಪಿಗಳನ್ನು ಪತ್ತೆ ಮಾಡಿ ಬಂಧಿಸಿದ್ದಾರೆ.