ನವದೆಹಲಿ : ಪೋರ್ನ್ ವೀಡಿಯೋಗಳಿಗೆ ಅಡಿಕ್ಟ್ ಆಗಿರುವ ವ್ಯಕ್ತಿಯೊಬ್ಬ ತನ್ನ ಪತ್ನಿಯನ್ನು ಪೋರ್ನ್ ಸ್ಟಾರ್ ಗಳಂತೆ ಡ್ರೆಸ್ ಧರಿಸು ಎಂದು ಮಾನಸಿಕ ಕಿರುಕುಳ ನೀಡಿದ ಪ್ರಕರಣವೊಂದು ಬಯಲಾಗಿದೆ.
30 ವರ್ಷದ ಮಹಿಳೆಯೊಬ್ಬು ಇದೀಗ ಪತಿ ವಿರುದ್ಧ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ. ಈ ದಂಪತಿ 2020ರಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದೆ. ಪತಿಯು ಪೋರ್ನ್ ವೀಡಿಯೋಗಳಿಗೆ ಅಡಿಕ್ಟ್ ಆಗಿದ್ದಾರೆ. ಅಲ್ಲದೆ ಮದುವೆಯಾದ ಬಳಿಕ ಪತಿ ಹಾಗೂ ಆತನ ಮನೆಯವರು ವರದಕ್ಷಿಣೆ ಕಿರುಕುಳ ನೀಡುತ್ತಿದ್ದಾರೆ. ಇಷ್ಟು ಮಾತ್ರವಲ್ಲದೇ ಇದೇ ವಿಚಾರಕ್ಕೆ ದೈಹಿಕ ಹಾಗೂ ಮಾನಸಿಕ ದೌರ್ಜನ್ಯವೆಸಗುತ್ತಿದ್ದಾರೆ ಎಂದು ಪತ್ನಿಯು ದೂರಿರುವುದಾಗಿ ಹಿರಿಯ ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.
ಮಹಿಳೆ ನೀಡಿದ ದೂರಿನ ಸಂಬಂಧ ಪತಿ ಹಾಗೂ ಆತನ ಮನೆಯವರ ವಿರುದ್ಧ ಐಪಿಸಿ ಸೆಕ್ಷನ್ 498 ಎ (ಕ್ರೌರ್ಯಕ್ಕೆ ಒಳಪಡಿಸುವುದು), 406 (ನಂಬಿಕೆ ದ್ರೋಹ) ಹಾಗೂ ವರದಕ್ಷಿಣೆ ನಿಷೇಧ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಪೊಲೀಸ್ ಉಪ ಆಯುಕ್ತ ರೋಹಿತ್ ಮೀನಾ ತಿಳಿಸಿದ್ದಾರೆ.