Publish Date: Fri, 29 Apr 2022 (10:54 IST)
Updated Date: Fri, 29 Apr 2022 (10:54 IST)
ಹೈದರಾಬಾದ್: ಗರ್ಭಿಣಿ ಪತ್ನಿಗೆ ಟಾಯ್ಲೆಟ್ ಕ್ಲೀನರ್ ಕುಡಿಸಿ ಚಿತ್ರಹಿಂಸೆ ನೀಡಿ ಪತಿಯೇ ಕೊಲೆ ಮಾಡಿದ ಘಟನೆ ತೆಲಂಗಾಣದಲ್ಲಿ ನಡೆದಿದೆ.
ಘಟನೆ ಬಳಿಕ ಆರೋಪಿ ಪತಿ ತಲೆಮರೆಸಿಕೊಂಡಿದ್ದು, ಪೊಲೀಸರು ಆತನಿಗಾಗಿ ಹುಡುಕಾಟ ನಡೆಸಿದ್ದಾರೆ. ಮೂರು ತಿಂಗಳ ಗರ್ಭಿಣಿಯಾಗಿರುವ ಪತ್ನಿಗೆ ಕಳೆದ ಕೆಲವು ಸಮಯದಿಂದ ಈತ ಕಿರುಕುಳ ನೀಡುತ್ತಿದ್ದ.
ನಾಲ್ಕು ವರ್ಷಗಳ ಹಿಂದೆ ಇಬ್ಬರ ಮದುವೆಯಾಗಿತ್ತು. ಆರಂಭದಲ್ಲಿ ಎಲ್ಲವೂ ಚೆನ್ನಾಗಿಯೇ ಇತ್ತು. ಇತ್ತೀಚೆಗೆ ವರದಕ್ಷಿಣೆಗಾಗಿ ಪೀಡಿಸುತ್ತಿದ್ದ ಎನ್ನಲಾಗಿದೆ.