Publish Date: Wed, 25 May 2022 (09:30 IST)
Updated Date: Wed, 25 May 2022 (09:42 IST)
ಲಕ್ನೋ: ಪತ್ನಿ ಹೆಣ್ಣು ಮಗುವಿಗೆ ಜನ್ಮ ನೀಡಲಿದ್ದಾಳೆ ಎಂಬ ಮಾಂತ್ರಿಕನ ಮಾತು ನಂಬಿ ಆಕೆಯನ್ನು ಕೊಲೆ ಮಾಡಿದ ಪತಿಯನ್ನು ಪೊಲೀಸರು ಬಂಧಿಸಿದ್ದಾರೆ.
ಹತ್ತು ದಿನಗಳ ಹಿಂದೆ ಗರ್ಭಿಣಿ ಮಹಿಳೆ ಮಸೀದಿಯೊಂದರಲ್ಲಿ ಅನುಮಾಸ್ಪದ ರೀತಿಯಲ್ಲಿ ಸಾವನ್ನಪ್ಪಿದ್ದಳು. ಆಕೆಯ ಮೃತದೇಹವನ್ನು ಪತಿ ಮಣ್ಣು ಮಾಡಿದ್ದ.
ಈ ಬಗ್ಗೆ ಅನುಮಾನಗೊಂಡ ಪೊಲೀಸರು ವಿಚಾರಣೆ ನಡೆಸಿದಾಗ ಸತ್ಯ ಬಯಲಾಗಿದೆ. ಮಾಂತ್ರಿಕನ ತನ್ನ ಪತ್ನಿ ಹೊಟ್ಟೆಯಲ್ಲಿ ಇರುವುದು ಹೆಣ್ಣು ಮಗು ಎಂದು ಭವಿಷ್ಯ ನುಡಿದಿದ್ದ. ಹೀಗಾಗಿ ಕೊಲೆ ಮಾಡಿರುವುದಾಗಿ ಸತ್ಯ ಒಪ್ಪಿಕೊಂಡಿದ್ದಾನೆ. ಇದೀಗ ಪೊಲೀಸರು ಮೃತದೇಹ ಹೊರತೆಗೆದು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದು, ಪತಿಯನ್ನು ಬಂಧಿಸಿದ್ದಾರೆ.