ಲಕ್ನೋ: ಪತ್ನಿಗೆ ಮತ್ತೊಬ್ಬನ ಜೊತೆ ಅಕ್ರಮ ಸಂಬಂಧವಿದೆಯೆಂಬ ಅನುಮಾನದ ಮೇರೆಗೆ ಪತಿ ಮಹಾಶಯ ಆಕೆಯ ಕುತ್ತಿಗೆ ಸೀಳಿ ಕೊಲೆ ಮಾಡಿದ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ.
ಸಂತ್ರಸ್ತ ಮಹಿಳೆ ಫ್ಯಾಕ್ಟರಿಯೊಂದರಲ್ಲಿ ನೌಕರಿಯಲ್ಲಿದ್ದಳು. ಅಲ್ಲಿಯೇ ಕೆಲಸ ಮಾಡುತ್ತಿದ್ದ ನೌಕರನೊಂದಿಗೆ ಆಕೆಗೆ ಅಕ್ರಮ ಸಂಬಂಧವಿದ್ದ ಬಗ್ಗೆ ಪತಿಗೆ ಶಂಕೆಯಿತ್ತು.
ಈ ಬಗ್ಗೆ ಪತ್ನಿಯನ್ನು ಪ್ರಶ್ನಿಸಿದ್ದ. ಈ ವೇಳೆ ಇಬ್ಬರ ನಡುವೆ ಕಲಹ ತಾರಕಕ್ಕೇರಿತ್ತು. ಈ ಸಂದರ್ಭದಲ್ಲಿ ಆಕೆಯ ಕುತ್ತಿಗೆಗೆ ಚಾಕುವಿನಿಂದ ಇರಿದು ಕೊಲೆ ಮಾಡಲಾಗಿದೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ಆರೋಪಿ ಪತಿಯನ್ನು ಬಂಧಿಸಿದ್ದಾರೆ.