ಚೆನ್ನೈ: ಗಂಡ-ಹೆಂಡತಿ ಜಗಳದಲ್ಲಿ ಕೂಸು ಪ್ರಾಣ ಕಳೆದುಕೊಂಡ ಘಟನೆ ತಮಿಳುನಾಡಿನಲ್ಲಿ ನಡೆದಿದೆ. ಆಪಾದಿತ ಗಂಡನನ್ನು ಈಗ ಪೊಲೀಸರು ಬಂಧಿಸಿದ್ದಾರೆ.
ಗಂಡ-ಹೆಂಡತಿ ನಡುವೆ ಕೌಟುಂಬಿಕ ಕಲಹವಾಗುತ್ತಿತ್ತು. ಕಳೆದ ಕೆಲವು ದಿನಗಳಿಂದಲೂ ಮನಸ್ತಾಪ ನಡೆಯುತ್ತಿತ್ತು. ಈ ಬಾರಿ ರೊಚ್ಚಿಗೆದ್ದ ಗಂಡ ಹೆಂಡತಿಯನ್ನು ಕೊಲೆ ಮಾಡುವ ಉದ್ದೇಶದಿಂದ ಆಕೆಯ ಮೈ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದ.
ತನ್ನ ತಾಯಿ ಬೆಂಕಿಗೆ ಆಹುತಿಯಾಗುವುದನ್ನು ಕಂಡು ಮಗಳು ರಕ್ಷಿಸಲು ಹೋಗಿದ್ದು ಆಕೆಗೂ ಬೆಂಕಿ ತಗುಲಿದೆ. ಪರಿಣಾಮ ಮಗಳು ಆಸ್ಪತ್ರೆಗೆ ಕರೆದೊಯ್ಯುವ ಮಾರ್ಗದಲ್ಲೇ ತೀವ್ರ ಸುಟ್ಟ ಗಾಯಗಳಿಂದಾಗಿ ಸಾವನ್ನಪ್ಪಿದ್ದಾಳೆ. ಇತ್ತ ತಾಯಿ ಗಂಭೀರ ಗಾಯಗೊಂಡು ಆಸ್ಪತ್ರೆ ಸೇರಿದ್ದಾಳೆ. ಇದೀಗ ಪೊಲೀಸರು ಆರೋಪಿಯನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.