Webdunia - Bharat's app for daily news and videos

Install App

ಗರ್ಭಿಣಿ ಪತ್ನಿಗೆ ಆ್ಯಸಿಡ್ ಕುಡಿಸಿ ಕೊಂದ ಪತಿ!

Webdunia
ಶುಕ್ರವಾರ, 29 ಏಪ್ರಿಲ್ 2022 (08:03 IST)
ಹೈದರಾಬಾದ್ : ಗರ್ಭಿಣಿ ಪತ್ನಿಗೆ ಬಲವಂತವಾಗಿ ಶೌಚಾಲಯ ಸ್ವಚ್ಛಗೊಳಿಸುವ ಆ್ಯಸಿಡ್ ಕುಡಿಸಿ ಪತಿಯೇ ಕೊಂದಿರುವ ಘಟನೆ ತೆಲಂಗಾಣದ ನಿಜಾಮಾಬಾದ್ ಜಿಲ್ಲೆಯಲ್ಲಿ ನಡೆದಿದೆ.

ಏಪ್ರಿಲ್ 27 ರಂದು ನಿಜಾಮಾಬಾದ್ನ ವರ್ಣಿ ಮಂಡಲದ ರಾಜಪೇಟ್ ತಾಂಡಾದಲ್ಲಿ ಈ ಘಟನೆ ನಡೆದಿದ್ದು, ಘಟನೆ ನಂತರ ಆರೋಪಿ ಪರಾರಿಯಾಗಿದ್ದಾನೆ. ಇದೀಗ ಪೊಲೀಸರು ಆರೋಪಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ. 

ಮೃತ ದುರ್ದೈವಿಯನ್ನು ಕಲ್ಯಾಣಿ ಎಂದು ಗುರುತಿಸಲಾಗಿದ್ದು, ಆರೋಪಿ ತರುಣ್ ಹಾಗೂ ಕಲ್ಯಾಣಿ ನಾಲ್ಕು ವರ್ಷಗಳ ಹಿಂದೆ ವಿವಾಹವಾಗಿದ್ದರು. ಮೂರು ತಿಂಗಳ ಹಿಂದೆ ಕಲ್ಯಾಣಿ ಗರ್ಭಿಣಿಯಾದ ಬಳಿಕ ತರುಣ್ ಆಕೆಗೆ ಕಿರುಕುಳ ನೀಡಲು ಪ್ರಾರಂಭಿಸಿದನು. ನೀನು ನೋಡಲು ಚೆನ್ನಾಗಿಲ್ಲ, ಕುಟುಂಬಸ್ಥರಿಂದ ವರದಕ್ಷಿಣೆ ತೆಗೆದುಕೊಂಡು ಬರುವಂತೆ ಸದಾ ಪೀಡಿಸುತ್ತಿದ್ದನು.

ಇದೇ ರೀತಿ ಮಂಗಳವಾರ ಇಬ್ಬರ ನಡುವೆ ವಾಗ್ವಾದ ನಡೆದಿದೆ. ನಂತರ ತರುಣ್ ಕಲ್ಯಾಣಿಗೆ ಶೌಚಾಲಯ ಕ್ಲೀನಿಂಗ್ ಲಿಕ್ವಿಡ್ ಬಲವಂತವಾಗಿ ಕುಡಿಸಿದ್ದಾನೆ ಎನ್ನಲಾಗುತ್ತಿದೆ. ಇದರಿಂದ ತೀವ್ರ ಅಸ್ವಸ್ಥಳಾಗಿದ್ದ ಕಲ್ಯಾಣಿಯನ್ನು, ಆಕೆಯ ಕುಟುಂಬಸ್ಥರು ಚಿಕಿತ್ಸೆಗಾಗಿ ನಿಜಾಮಾಬಾದ್ನ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಈ ವೇಳೆ ಚಿಕಿತ್ಸೆ ಫಲಕಾರಿಯಾಗದೆ ಕಲ್ಯಾಣಿ ಬುಧವಾರ ಮೃತಪಟ್ಟಿದ್ದಾಳೆ. 

ಸದ್ಯ ಪೊಲೀಸರು ತರುಣ್ ಮತ್ತು ಆತನ ಕುಟುಂಬದ ಇಬ್ಬರ ವಿರುದ್ಧ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 302, 304-ಬಿ ಮತ್ತು 498-ಎ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Air India ‌Flight Crash: ಮೃತ ಪ್ರತಿ ಪ್ರಯಾಣಿಕನ ಕುಟುಂಬಕ್ಕೆ ತಲಾ ₹1 ಕೋಟಿ ಘೋಷಿಸಿದ ಟಾಟಾ ಗ್ರೂಪ್

Air India Plane crash: ವಿಮಾನ ಅಪಘಾತಕ್ಕೆ ಇದೇ ಕಾರಣ: ಮಲ್ಲಿಕಾರ್ಜುನ ಖರ್ಗೆ ಸ್ಪೋಟಕ ಹೇಳಿಕೆ

Air India Plane crash: ಸುತ್ತಲೂ ಹೆಣಗಳ ರಾಶಿಯಿತ್ತು, ಬದುಕುಳಿದ ಏಕೈಕ ವ್ಯಕ್ತಿ ಬಿಚ್ಚಿಟ್ಟ ಭಯಾನಕ ಸತ್ಯ

Air India Flight Crash: ಗಂಡನ ಭೇಟಿಗಾಗಿ ಲಂಡನ್‌ಗೆ ಹೊರಟ್ಟಿದ್ದ ಮಹಿಳೆ ಸೇರಿದ್ದು ಮಸಣಕ್ಕೆ, ಕಣ್ಣೀರ ಕತೆ

Air India Crash: 10 ನಿಮಿಷ ಲೇಟ್‌, ಟ್ರಾಫಿಕ್‌ನಲ್ಲಿ ಸಿಲುಕಿ ಮಹಿಳೆ ಜಸ್ಟ್ ಬಚಾವ್‌

ಮುಂದಿನ ಸುದ್ದಿ
Show comments