Select Your Language

Notifications

webdunia
webdunia
webdunia
webdunia

ಹೈದರಾಬಾದ್ ಎನ್ ಕೌಂಟರ್: ದಿಶಾ ಅತ್ಯಾಚಾರಿಗಳ ಮೃತದೇಹ ಹಸ್ತಾಂತರ

ಹೈದರಾಬಾದ್ ಎನ್ ಕೌಂಟರ್: ದಿಶಾ ಅತ್ಯಾಚಾರಿಗಳ ಮೃತದೇಹ ಹಸ್ತಾಂತರ
ಹೈದರಾಬಾದ್ , ಮಂಗಳವಾರ, 24 ಡಿಸೆಂಬರ್ 2019 (10:13 IST)
ಹೈದರಾಬಾದ್: ಹೈದರಾಬಾದ್ ನಲ್ಲಿ ಡಿಸೆಂಬರ್ 6 ರಂದು ಪೊಲೀಸರ ಎನ್ ಕೌಂಟರ್ ನಲ್ಲಿ ಹತ್ಯೆಯಾಗಿದ್ದ ನಾಲ್ವರು ಅತ್ಯಾಚಾರ ಆರೋಪಿಗಳ ಮೃತದೇಹವನ್ನು ಕುಟುಂಬಸ್ಥರಿಗೆ ಹಸ್ತಾಂತರಿಸಲಾಗಿದೆ.


ದಿಶಾ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ಬಂಧಿತರಾಗಿದ್ದ ನಾಲ್ವರು ಆರೋಪಿಗಳು ಡಿಸೆಂಬರ್ 6 ರಂದು ಬೆಳಗಿನ ಜಾವ ಸ್ಥಳ ಮಹಜರಿಗೆ ಹೋಗಿದ್ದಾಗ ಪೊಲೀಸರ ಮೇಲೇ ದಾಳಿ ನಡೆಸಿ ತಪ್ಪಿಸಿಕೊಳ್ಳಲು ಯತ್ನಿಸಿದ್ದರು. ಈ ವೇಳೆ ಪೊಲೀಸರು ಆರೋಪಿಗಳನ್ನು ಗುಂಡಿಕ್ಕಿ ಹತ್ಯೆ ಮಾಡಿದ್ದರು.

ಈ ಘಟನೆ ದೇಶದಾದ್ಯಂತ ಸಂಚಲನ ಮೂಡಿಸಿತ್ತು. ಇದಾದ ಬಳಿಕ ಕೋರ್ಟ್ ಸೂಚನೆಯಂತೆ ಅಪರಾಧಿಗಳ ಶವಗಳನ್ನು ಆಸ್ಪತ್ರೆಯಲ್ಲೇ ಇರಿಸಲಾಗಿತ್ತು. ಇದೀಗ ಎರಡನೆಯ ಬಾರಿಗೆ ಮರಣೋತ್ತರ ಪರೀಕ್ಷೆ ನಡೆಸಿ ಆರೋಪಿಗಳಾದ ಮೊಹಮ್ಮದ್ ಆರಿಫ್, ಜೊಲ್ಲು ನವೀನ್, ಜೊಲ್ಲು ಶಿವ, ಚಿಂತಾಕುಂಟಾ ಕೇಶವುಲು ಮೃತದೇಹಗಳನ್ನು ಕುಟುಂಬದವರಿಗೆ ಹಸ್ತಾಂತರಿಸಲಾಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಮಂಗಳೂರು ಗಲಭೆಯ ವಿಡಿಯೋ ಬಿಡುಗಡೆ ಮಾಡಿದ ಪೊಲೀಸರು