Publish Date: Fri, 06 Dec 2019 (08:55 IST)
Updated Date: Fri, 06 Dec 2019 (08:57 IST)
ಹೈದರಾಬಾದ್: ದೇಶವನ್ನೇ ತಲ್ಲಣಗೊಳಿಸಿದ್ದ ಪಶುವೈದ್ಯೆ ಪ್ರಿಯಾಂಕ ರೆಡ್ಡಿ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ನಾಲ್ವರು ಆರೋಪಿಗಳನ್ನು ತೆಲಂಗಾಣ ಪೊಲೀಸರು ಎನ್ ಕೌಂಟರ್ ಮಾಡಿ ಹತ್ಯೆ ಮಾಡಿದ್ದಾರೆ.
ನಿನ್ನೆ ತಡ ರಾತ್ರಿ ಸ್ಥಳ ಮಹಜರು ಮಾಡಲು ಘಟನೆ ನಡೆದ ಸ್ಥಳಕ್ಕೆ ತೆರಳಿದ್ದಾಗ ಆರೋಪಿಗಳು ಪೊಲೀಸರ ಮೇಲೆ ಕಲ್ಲು ತೂರಾಟ ನಡೆಸಿ ಪರಾರಿಯಾಗಲು ಯತ್ನಿಸಿದ್ದರು. ಈ ವೇಳೆ ಪೊಲೀಸರು ನಾಲ್ವರೂ ಆರೋಪಿಗಳನ್ನು ಎನ್ ಕೌಂಟರ್ ಮಾಡಿ ಹತ್ಯೆ ಮಾಡಬೇಕಾಯಿತು.
ಘಟನೆ ನಡೆದ ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಆಗಮಿಸಿ ತಪಾಸಣೆ ನಡೆಸಿದ್ದಾರೆ. ನಾಲ್ವರೂ ಆರೋಪಿಗಳ ಹತ್ಯೆ ಬಗ್ಗೆ ಪ್ರತಿಕ್ರಿಯಿಸಿರುವ ಸಂತ್ರಸ್ತೆಯ ಕುಟುಂಬಸ್ಥರು ತಮ್ಮ ಮಗಳ ಸಾವಿಗೆ ನ್ಯಾಯ ದೊರಕಿತು ಎಂದಿದ್ದಾರೆ.