Select Your Language

Notifications

webdunia
webdunia
webdunia
webdunia

ಸಾಲ ತೀರಿಸಲಾಗದೆ ಮನೆ ಕಳ್ಕೊಂಡೆ, ಇಂದಿಗೂ ಬಾಡಿಗೆ ಮನೆಯಲ್ಲಿದ್ದೇನೆ: ಸಿಎಂ ಸಿದ್ದರಾಮಯ್ಯ

Chief Minister Siddaramaiah On Valmiki MUDA Scam

Sampriya

ಬೆಂಗಳೂರು , ಶುಕ್ರವಾರ, 9 ಆಗಸ್ಟ್ 2024 (19:23 IST)
ಬೆಂಗಳೂರು: ನಾನು ರಾಜ್ಯದ ಜನರ ಆಶೀರ್ವಾದದಿಂದ ಎರಡು ಬಾರಿ ಉಪ ಮುಖ್ಯಮಂತ್ರಿಯಾಗಿದ್ದೀನಿ. ಎರಡು ಬಾರಿ ಮುಖ್ಯಮಂತ್ರಿಯಾಗಿದ್ದೇನೆ. ನನಗೆ ಇಷ್ಟೆಲ್ಲಾ ಅಧಿಕಾರ ಸಿಕ್ಕಾಗಲೂ ನನಗೆ ಹಣ ಮಾಡುವ ಆಸೆ ಬಂದಿಲ್ಲ, ನನ್ನ ಪತ್ನಿ ಇವತ್ತಿನವರೆಗೂ ಸಾರ್ವಜನಿಕವಾಗಿ ಕಾಣಿಸಿಲ್ಲ. ಎರಡು ಬಾರಿ ಸಿಎಂ ಆದರೂ ಪ್ರಮಾಣ ವಚನಕ್ಕೂ ಬರಲಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಅವರು ಹೇಳಿದರು.

ಮಹಾರಾಜ ಕಾಲೇಜು ಮೈದಾನದಲ್ಲಿ ನಡೆದ ಬೃಹತ್ ಜನಾಂದೋಲನ ಸಮಾವೇಶದಲ್ಲಿ ಸಿಎಂ ಸಿದ್ದರಾಮಯ್ಯ ಮಾತನಾಡುತ್ತಾ ಮುಡಾ ಹಗರಣ ಸುಳ್ಳು ಆರೋಪ ಎಂದು ಸಾರಿ ಹೇಳಿದರು.

ನನ್ನ ರಾಜಕೀಯ ಜೀವನದಲ್ಲಿ ಇದುವರೆಗೂ 15 ಬಜೆಟ್ ಮಂಡಿಸಿದ್ದೇನೆ. ನನಗೆ ಹಣದ ಮೋಹ ಇದ್ದಿದ್ದರೆ ಕೋಟಿ ಕೋಟಿ ಮಾಡಬಹುದಿತ್ತು. ಇಷ್ಟು ದಿನವಾದರೂ ನನಗೆ ಮೈಸೂರಲ್ಲಿ ಮನೆ ಇಲ್ಲ, ಈಗ ಕಟ್ಟಿಸುತ್ತಿದ್ದೇನೆ. ಹಿಂದಿದ್ದ ಮನೆ ಸಾಲ ತಗೊಂಡು ಕಟ್ಟಿಸಿದ್ದೆ. ಸಾಲ ತೀರಿಸಲಾಗದೆ ಆ ಮನೆ ಮಾರಿಬಿಟ್ಟೆ. ಬಾಡಿಗೆ ಮನೆಯಲ್ಲಿ ಇದ್ದುಕೊಂಡೇ ವಿಧಾನಸಭೆ, ಲೋಕಸಭೆ ಚುನಾವಣೆ ಮಾಡಿದೆ. ಈಗ ಕಟ್ಟುತ್ತಿರುವ ಮನೆ ಬಿಟ್ಟು ನನ್ನ ಹೆಸರಲ್ಲಿ ಒಂದೇ ಒಂದು ಸೈಟು ಇದ್ದರೆ ತೋರಿಸಿ.

ಈಗ ರಾಜಭವನವನ್ನು ದುರುಪಯೋಗಪಡಿಸಿಕೊಂಡು ನನ್ನ ವಿರುದ್ಧ ಷಡ್ಯಂತ್ರ ನಡೆಸುತ್ತಿದ್ದಾರೆ. ಈ ಷಡ್ಯಂತ್ರದಲ್ಲಿ ಎಚ್ ಡಿ ಕುಮಾರಸ್ವಾಮಿ, ಬಿಎಸ್ ಯಡಿಯೂರಪ್ಪ, ಬಿ ವೈ ವಿಜಯೇಂದ್ರ, ಆರ್‌ ಅಶೋಕ್ ಸೇರಿದ್ದಾರೆ.

ಕುಮಾರಸ್ವಾಮಿ ವಿರುದ್ಧ, ನಿರಾಣಿ ವಿರುದ್ಧ, ಶಶಿಕಲಾ ಜೊಲ್ಲೆ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ಕೇಳಿದರೂ ರಾಜಭವನದಿಂದ ಇದುವರೆಗೂ ನೋಟಿಸ್ ಹೋಗಿಲ್ಲ. ಆದರೆ ನನಗೆ ಮಾತ್ರ ನೋಟಿಸ್ ಬಂದಿದೆ. ಇದು ಪರಮದ್ರೋಹ ಅಲ್ಲವೇ?

ನಾವು ಭ್ರಷ್ಟಾಚಾರ ಮಾಡಲು ಸಾಧ್ಯವಿಲ್ಲ. ನಿಮ್ಮ ನಂಬಿಕೆಗೆ ದ್ರೋಹ ಎಸಗಲು ಸಾಧ್ಯವಿಲ್ಲ. ನಾನು ರಾಜಕೀಯದಲ್ಲಿ ಇರುವವರೆಗೂ ಯಾವತ್ತೂ ನಿಮ್ಮ ನಂಬಿಕೆಗೆ ದ್ರೋಹ ಬಗೆಯಲ್ಲ.

Share this Story:

Follow Webdunia kannada

ಮುಂದಿನ ಸುದ್ದಿ

ಹರಿಯಾಣ ಶಾಲೆಗಳಲ್ಲಿ 'ಗುಡ್‌ಮಾರ್ನಿಂಗ್‌'ಗೆ ಗುಡ್‌ಬೈ: ಇನ್ಮುಂದೆ 'ಜೈ ಹಿಂದ್‌' ಹೇಳಬೇಕು