Select Your Language

Notifications

webdunia
webdunia
webdunia
webdunia

ಚುನಾವಣೆ ಬಗ್ಗೆ ನಡ್ಡಾ ಜೊತೆ ಚರ್ಚಿಸಿದ್ದೇನೆ : ಬಿಎಸ್‌ವೈ

ಚುನಾವಣೆ ಬಗ್ಗೆ ನಡ್ಡಾ ಜೊತೆ ಚರ್ಚಿಸಿದ್ದೇನೆ : ಬಿಎಸ್‌ವೈ
ನವದೆಹಲಿ , ಶನಿವಾರ, 27 ಆಗಸ್ಟ್ 2022 (10:35 IST)
ನವದೆಹಲಿ : ಮುಂದಿನ 8 ತಿಂಗಳಲ್ಲಿ ವಿಧಾನಸಭಾ ಚುನಾವಣೆ ಇದೆ. ಈ ಹಿನ್ನೆಲೆ ಪಕ್ಷದ ಸಂಘಟನೆ ಹಾಗೂ ಮುಂದಿನ ಚುನಾವಣೆ ಬಗ್ಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ಅವರೊಂದಿಗೆ ಚರ್ಚಿಸಿದ್ದೇನೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ತಿಳಿಸಿದರು.
 
ಶುಕ್ರವಾರ ದೆಹಲಿಯಲ್ಲಿ ಜೆ.ಪಿ ನಡ್ಡಾ ಅವರನ್ನು ಭೇಟಿ ಮಾಡಿದ ಬಳಿಕ ಮಾತನಾಡಿದ ಬಿಎಸ್ವೈ, ವಿಧಾನಸಭಾ ಚುನಾವಣೆಗೆ ಇನ್ನು 8 ತಿಂಗಳು ಇದೆ. ಹೀಗಾಗಿ ನಡ್ಡಾ ಅವರನ್ನು ನಮ್ಮ ರಾಜ್ಯದಲ್ಲಿ ಹೆಚ್ಚು ಪ್ರವಾಸ ಮಾಡುವಂತೆ ಮನವಿ ಮಾಡಿದ್ದೇನೆ. ಆದರೆ ರಾಜ್ಯಾಧ್ಯಕ್ಷರ ಬಗ್ಗೆ ಚರ್ಚೆ ಮಾಡಿಲ್ಲ. ಆ ತಿರ್ಮಾನವನ್ನು ಪಕ್ಷವೇ ಮಾಡಲಿದೆ ಎಂದು ಹೇಳಿದರು.

ನಡ್ಡಾ ಅವರು ರಾಜ್ಯಕ್ಕೆ ಹೆಚ್ಚು ಸಮಯ ನೀಡುವ ಭರವಸೆ ನೀಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಹಾಗೂ ನಡ್ಡಾ ಇಬ್ಬರೂ ರಾಜ್ಯಕ್ಕೆ ಬರಲಿದ್ದಾರೆ. ಇದೀಗ ಮಂಗಳೂರಿನಲ್ಲಿ ನಡೆಯಲಿರುವ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕಿದೆ. ಇದಕ್ಕಾಗಿ ಮಾಡಿಕೊಂಡಿರುವ ತಯಾರಿ ಬಗ್ಗೆ ವರಿಷ್ಠರಿಗೆ ಮಾಹಿತಿ ನೀಡಿದ್ದೇನೆ ಎಂದು ತಿಳಿಸಿದರು. 

 

 

Share this Story:

Follow Webdunia kannada

ಮುಂದಿನ ಸುದ್ದಿ

ಮಾಜಿ ಸಿಎಂ ಸಿದ್ದರಾಮಯ್ಯ ಕಿರಿಯ ಸಹೋದರ ನಿಧನ