Webdunia - Bharat's app for daily news and videos

Install App

ಇದು ನನ್ನ ಪುನರ್ಜನ್ಮ: ಜಯಲಲಿತಾ

Webdunia
ಸೋಮವಾರ, 14 ನವೆಂಬರ್ 2016 (16:57 IST)
50 ದಿನಗಳಿಗಿಂತಲೂ ಹೆಚ್ಚು ದಿನಗಳಿಂದ ಆಸ್ಪತ್ರೆಯಲ್ಲಿದ್ದ ಜಯಲಲಿತಾ ಇದೇ ಮೊದಲ ಬಾರಿಗೆ ಅಧಿಕೃತ ಹೇಳಿಕೆಯನ್ನು ನೀಡಿದ್ದು, ನನಗೆ ಪುನರ್ಜನ್ಮ ಸಿಕ್ಕಿದೆ ಎಂದಿದ್ದಾರೆ.
ತಮಿಳುನಾಡು ಜನರ ಮತ್ತು ಇತರ ರಾಜ್ಯಗಳ ಮತ್ತು ಜಗತ್ತಿನಾದ್ಯಂತ ಇರುವ ನನ್ನ ಬೆಂಬಲಿಗರ ನಿರಂತರ ಪ್ರಾರ್ಥನೆ, ಹರಕೆಗಳ ಫಲವಾಗಿ ನನಗೆ ಪುನರ್ಜನ್ಮ ಸಿಕ್ಕಿದೆ. ಇದನ್ನು ಹೇಳಲು ನನಗೆ ಸಂತೋಷವಾಗುತ್ತಿದೆ. ಜನರ ಪ್ರೀತಿ ನನ್ನ ಮೇಲಿರುವುದರಿಂದ ಯಾವ ಕೆಟ್ಟ ಶಕ್ತಿಯೂ ನನ್ನನ್ನು ಬಾಧಿಸಲು. ದೇವರ ದಯೆಯಿಂದ ಸಂಪೂರ್ಣ ಗುಣಮುಖಳಾಗಿ ಜನರ ಸೇವೆಗಿಳಿಯುತ್ತೇನೆ ಎಂದು ಜಯಾ ಹೇಳಿದ್ದಾರೆ. 
 
ಎಐಡಿಎಂಕೆ ಪ್ರಧಾನ ಕಚೇರಿಯಲ್ಲಿ, ಪಕ್ಷದ ಪ್ರಧಾನ ಕಾರ್ಯದರ್ಶಿ ಮತ್ತು ಮುಖ್ಯಮಂತ್ರಿ ಜೆ.ಜಯಲಲಿತಾ ಅವರು ನೀಡಿರುವ 2 ಪುಟಗಳ ಹೇಳಿಕೆಯನ್ನು ಬಿಡುಗಡೆಗೊಳಿಸಲಾಗಿದೆ. ಇದರಲ್ಲಿ ಜಯಾ, ತಂಜಾವೂರು, ಅರಾವಕ್ಕುರುಚಿ, ತಿರುಪ್ಪರನ್ ಕುಂಡ್ರಂ ಮತ್ತು ಪಾಂಡಿಚೇರಿಯ ನೆಲ್ಲಿ ದೊಪೆ ವಿಧಾನಸಭಾ ಕ್ಷೇತ್ರಗಳಲ್ಲಿ ನವೆಂಬರ್ 19ರಂದು ನಡೆಯಲಿರುವ ಚುನಾವಣೆಗಳಲ್ಲಿ ತಮ್ಮ ಪಕ್ಷಕ್ಕೆ ಮತ ನೀಡುವಂತೆ ಮನವಿ ಮಾಡಿಕೊಂಡಿದ್ದಾರೆ.
 
ತಮಗೆ ಅನಾರೋಗ್ಯವಾಗಿದ್ದರಿಂದ ನೊಂದು ಆತ್ಮಹತ್ಯೆಗೆ ಶರಣಾದ ಪಕ್ಷದ ಕಾರ್ಯಕರ್ತರನ್ನು ನೆನೆಸಿ ಅವರು ದುಃಖವನ್ನು ವ್ಯಕ್ತ ಪಡಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments