Select Your Language

Notifications

webdunia
webdunia
webdunia
webdunia

ನಾನೂ ಸಹ ಮೋದಿಯ ಅಭಿಮಾನಿಯಾಗಿದ್ದೇನೆ : ಎಲಾನ್ ಮಸ್ಕ್

ನಾನೂ ಸಹ ಮೋದಿಯ ಅಭಿಮಾನಿಯಾಗಿದ್ದೇನೆ : ಎಲಾನ್ ಮಸ್ಕ್
ನ್ಯೂಯಾರ್ಕ್ , ಗುರುವಾರ, 22 ಜೂನ್ 2023 (14:15 IST)
ನ್ಯೂಯಾರ್ಕ್ : ನಾನು ಭಾರತದ ಪ್ರಧಾನಿ ನರೇಂದ್ರ ಮೋದಿಯವರ ಅಭಿಮಾನಿ ಎಂದು ಟೆಸ್ಲಾ ಸಿಇಒ ಮತ್ತು ಟ್ವಿಟ್ಟರ್ ಮಾಲೀಕ ಎಲಾನ್ ಮಸ್ಕ್ ಹೇಳಿದ್ದಾರೆ.

ಅಮೆರಿಕ ಪ್ರವಾಸದಲ್ಲಿರುವ ಮೋದಿಯವರನ್ನು ಭೇಟಿಯಾದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಭೇಟಿ ನನಗೆ ರೋಮಾಂಚನಕಾರಿ ಅನುಭವ ನೀಡಿದೆ. ಅವರು ಕೆಲವು ವರ್ಷಗಳ ಹಿಂದೆ ನಮ್ಮ ಕಾರ್ಖಾನೆಗೆ ಭೇಟಿ ನೀಡಿದ್ದರು. ಇದರಿಂದಾಗಿ ಅವರ ಬಗ್ಗೆ ನನಗೆ ತಿಳಿದಿದೆ. ಅವರು ನನಗೆ ಭಾರತಕ್ಕೆ ಆಮಂತ್ರಣ ನೀಡಿದ್ದಾರೆ. ಶೀಘ್ರದಲ್ಲೇ ನಾನು ಭಾರತಕ್ಕೆ ಭೇಟಿ ನೀಡಲಿದ್ದೇನೆ ಎಂದಿದ್ದಾರೆ. 

ಮೋದಿಯವರು ನಿಜವಾಗಿಯೂ ಭಾರತದ ಬಗ್ಗೆ ಬಹಳಷ್ಟು ಕಾಳಜಿ ವಹಿಸುತ್ತಾರೆ. ಅಲ್ಲದೇ ಅವರು ಸರಿಯಾದ ನಿರ್ಧಾರಗಳನ್ನೇ ತೆಗೆದುಕೊಳ್ಳುತ್ತಾರೆ. ಈಗ ತಮ್ಮ ದೇಶದಲ್ಲಿ ಹೂಡಿಕೆ ಮಾಡಲು ನಮ್ಮನ್ನು ಒತ್ತಾಯಿಸುತ್ತಿದ್ದಾರೆ.


Share this Story:

Follow Webdunia kannada

ಮುಂದಿನ ಸುದ್ದಿ

ಲಿಂಗ ಬದಲಾವಣೆ ನೆಪದಲ್ಲಿ ತಂತಿಯಿಂದ ಸಲಿಂಗಕಾಮಿ ಮಹಿಳೆ ಹತ್ಯೆ!