ನವದೆಹಲಿ: ಉಪಚುನಾವಣೆಯಲ್ಲಿ ಸೋತ ತಕ್ಷಣ ನಾನು ರಾಜಕೀಯ ಬಿಡುವುದಿಲ್ಲ. ಟೀಕೆ ಮಾಡುವ ಜನರು ಯಾವಾಗಲೂ ಇರ್ತಾರೆ, ನನ್ನ ವಿರುದ್ಧ ಬರುವ ಟೀಕೆಗಳನ್ನು ಸ್ವೀಕಾರ ಮಾಡುತ್ತೇನೆ. ನನ್ನ ಕೊನೆ ಉಸಿರು ಇರುವವರೆಗೂ ರಾಜಕೀಯ ಮಾಡುತ್ತೇನೆ ಎಂದು ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ಹೇಳಿದರು.
ನವದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತಾ, ಶಾಸಕ ಸಿ.ಪಿ ಯೋಗೇಶ್ವರ್ ಹೇಳಿಕೆಗೆ ಕೌಂಟರ್ ಕೊಟ್ಟರು.
ಶುಕ್ರವಾರ ಸಂಸತ್ ನಲ್ಲಿ ಬೆಂಗಳೂರಿಗೆ ಕುಡಿಯುವ ನೀರಿನ ಬಗ್ಗೆ ಮಾತನಾಡಿದ್ದೇನೆ. ನನ್ನ ರಾಜ್ಯಸಭೆ ಅವಧಿ 18 ತಿಂಗಳು ಇದೆ, ನನ್ನ ಆರೋಗ್ಯ ಇರುವವರೆಗೂ ನಾನು ಹೋರಾಟ ಮಾಡುತ್ತೇನೆ, ಆರೋಗ್ಯ ವ್ಯತಾಸ ಆದರೆ ಗೊತ್ತಿಲ್ಲ ಎಂದರು.
ಹಾಸನದಲ್ಲಿ ಕಾಂಗ್ರೆಸ್ ಜನ ಕಲ್ಯಾಣ ಸಮಾವೇಶದ ಬಗ್ಗೆ ಮಾತನಾಡಿದ ಅವರು, ಹಾಸನದಲ್ಲಿ ಸಮಾವೇಶದಿಂದ ಜೆಡಿಎಸ್ ಮೇಲೆ ಯಾವುದೇ ಪರಿಣಾಮ ಬೀರಲ್ಲ, ಜೆಡಿಎಸ್ ಟಾರ್ಗೆಟ್ ಮಾಡಲೆಂದೇ ಹಾಸನದಲ್ಲಿ ಸಮಾವೇಶ ಮಾಡಿದ್ದಾರೆ. ಅದೆಲ್ಲವನ್ನೂ ಎದುರಿಸುವ ಸಾಮರ್ಥ್ಯ ಜೆಡಿಎಸ್‌ಗೆ ಇದೆ ಎಂದು ಹೇಳಿದರು.