ಚಂಡೀಗಢ : ಮತದಾನಕ್ಕೆ ಇನ್ನೂ ಕೆಲವೇ ದಿನಗಳು ಬಾಕಿ ಇರುವಾಗ ಪಂಜಾಬ್ನಲ್ಲಿ ಚುನಾವಣೆ ಕಾವು ಜೋರಾಗಿದ್ದು, ಮತದಾರರನ್ನು ಓಲೈಸಲು ಹಲವು ಭರಪೂರ ಕೊಡುಗೆಗಳನ್ನು ಘೋಷಿಸಲಾಗುತ್ತಿದೆ.
ಇದೇ ಹಾದಿಯಲ್ಲಿರುವ ಪಂಜಾಬ್ ಮುಖ್ಯಮಂತ್ರಿ ಚರಂಜಿತ್ ಸಿಂಗ್ ಚನ್ನಿ ಶಿಕ್ಷಣ, ಆರೋಗ್ಯ, ಉದ್ಯೋಗ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಉಚಿತ ಕೊಡುಗೆಗಳ ಭರವಸೆ ನೀಡಿದ್ದಾರೆ.
ಇಂದು ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಪಂಜಾಬ್ನಲ್ಲಿ ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬಂದರೆ 1 ಲಕ್ಷ ಉದ್ಯೋಗ ನೀಡುವುದಾಗಿ ಭರವಸೆ ನೀಡಿದ್ದಾರೆ. ಅಲ್ಲದೆ ಆರು ತಿಂಗಳಲ್ಲಿ ಬಡವರಿಗೆ ವಸತಿ ಕಲ್ಪಿಸುವುದಾಗಿ ಘೋಷಿಸಿದ್ದಾರೆ.
ನಾವು ಶಿಕ್ಷಣ, ಆರೋಗ್ಯ ಮತ್ತು ವಸತಿಗಳಲ್ಲಿ ಕ್ಷೇತ್ರದಲ್ಲಿ ಕೇಂದ್ರಿಕರಿಸಲಿದ್ದು, ಸಣ್ಣ ಉದ್ಯಮಿಗಳಿಗೂ ತೇರಿಗೆ ರಿಯಾಯಿತಿ ನೀಡುತ್ತೇವೆ, ಮಹಿಳೆಯರ ಅಭ್ಯುದಯಕ್ಕಾಗಿ ಕಾಂಗ್ರೆಸ್ ಶ್ರಮಿಸುತ್ತಿದೆ ಎಂದು ಚನ್ನಿ ಟ್ವೀಟ್ ಮಾಡಿದ್ದಾರೆ.