Select Your Language

Notifications

webdunia
webdunia
webdunia
webdunia

ಹೊರಗಿನ ಹುಡುಕಾಟಕ್ಕೆ ವಿಜ್ಞಾನವಾದರೆ ಅಂತರಂಗಕ್ಕೆ ಆಧ್ಯಾತ್ಮ : ಸೋಮನಾಥ್

ಶಿವಶಕ್ತಿ
ತಿರುವನಂತಪುರಂ , ಸೋಮವಾರ, 28 ಆಗಸ್ಟ್ 2023 (09:47 IST)
ತಿರುವನಂತಪುರಂ : ವಿಕ್ರಂ ಲ್ಯಾಂಡರ್ ಚಂದ್ರನ ದಕ್ಷಿಣ ಧ್ರುವದ ಮೇಲೆ ಇಳಿದ ಸ್ಥಳವನ್ನು ಶಿವಶಕ್ತಿ ಪಾಯಿಂಟ್ ಎಂದು ಪ್ರಧಾನಿ ಮೋದಿ ನಾಮಕರಣ ಮಾಡಿದ್ದರಲ್ಲಿ ಯಾವುದೇ ತಪ್ಪಿಲ್ಲ ಎಂದು ಇಸ್ರೋ ಅಧ್ಯಕ್ಷ ಸೋಮನಾಥ್ ಹೇಳಿದ್ದಾರೆ.

ಚಂದ್ರಯಾನ-3 ಯಶಸ್ವಿಯಾದ ಬಳಿಕ ಕೇರಳದ ತಿರುವನಂತಪುರಂನಲ್ಲಿರುವ ಪೌರ್ಣಮಿಕಾವು-ಭದ್ರಕಾಳಿ ದೇವಸ್ಥಾನಕ್ಕೆ ಭೇಟಿ ನೀಡಿ ಸೋಮನಾಥ್ ಪ್ರಾರ್ಥನೆ ಸಲ್ಲಿಸಿದರು.

ಈ ವೇಳೆ ಮಾಧ್ಯಮದ ಜೊತೆ ಮಾತನಾಡಿದ ಅವರು, ವಿಕ್ರಂ ಲ್ಯಾಂಡರ್ ಚಂದ್ರನನ್ನು ಸ್ಪರ್ಶಿಸಿದ ಜಾಗಕ್ಕೆ ‘ಶಿವಶಕ್ತಿ’ ಎಂದು ನಾಮಕರಣ ಮಾಡಿದ್ದರಲ್ಲಿ ಯಾವುದೇ ತಪ್ಪಿಲ್ಲ. ಆ ಸ್ಥಳಕ್ಕೆ ಹೆಸರಿಡುವ ಹಕ್ಕು ರಾಷ್ಟ್ರಕ್ಕೆ ಇದೆ ಎಂದರು. 

ಪ್ರಧಾನಿ ನರೇಂದ್ರ ಮೋದಿ ಅವರು ನಮಗೆಲ್ಲರಿಗೂ ಸರಿಹೊಂದುವ ರೀತಿಯಲ್ಲಿ ಶಿವಶಕ್ತಿ ಅರ್ಥವನ್ನು ವಿವರಿಸಿದ್ದಾರೆ. ಅದರಲ್ಲಿ ಯಾವುದೇ ತಪ್ಪಿಲ್ಲ ಎಂದು ನಾನು ಭಾವಿಸುತ್ತೇನೆ. ಚಂದ್ರಯಾನ–2 ಪತನವಾಗಿದ್ದ ಸ್ಥಳವನ್ನು ‘ತಿರಂಗಾ ಪಾಯಿಂಟ್ʼ ಎಂದು ಹೆಸರನ್ನು ಇರಿಸಿದ್ದಾರೆ. ಎರಡೂ ಭಾರತೀಯ ಧ್ವನಿಯ ಹೆಸರುಗಳಾಗಿವೆ. ನಾವು ಏನು ಮಾಡುತ್ತಿದ್ದೇವೆ ಎಂಬುದರ ಮಹತ್ವ ನಮಗೆ ತಿಳಿದಿರಬೇಕು  ಎಂದು ಹೇಳಿದರು.


Share this Story:

Follow Webdunia kannada

ಮುಂದಿನ ಸುದ್ದಿ

ಪಲಾವ್‍ನಲ್ಲಿ ವಿಷ ಬೆರೆಸಿ ತಂದೆ-ತಾಯಿಯನ್ನೇ ಕೊಲೆಗೈದ ಮಗ!?