ಸುಗ್ರೀವಾಜ್ಞೆ ಹರಿದು ಎಸೆಯದೇ ಇದ್ದಿದ್ದರೆ ರಾಹುಲ್ ಅನರ್ಹರಾಗುತ್ತಿರಲಿಲ್ಲ!

Webdunia
ಶನಿವಾರ, 25 ಮಾರ್ಚ್ 2023 (12:05 IST)
ನವದೆಹಲಿ : ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ ಜೈಲು ಶಿಕ್ಷೆಯಾಗಿ ಸಂಸದ ಸ್ಥಾನದಿಂದ ಅನರ್ಹವಾಗುತ್ತಿದ್ದಂತೆ 2013ರಲ್ಲಿ ಯುಪಿಎ ಸರ್ಕಾರ ಹೊರಡಿಸಿದ ಸುಗ್ರೀವಾಜ್ಞೆ ವಿಚಾರ ಈಗ ಚರ್ಚೆ ಆಗುತ್ತಿದೆ.
 
ಈ ಚರ್ಚೆಯಾಗಲು ಕಾರಣ 2013ರಲ್ಲಿ ನಡೆದ ಘಟನೆ. ಅಂದು ಸುಗ್ರೀವಾಜ್ಞೆಯನ್ನು ಹರಿದು ಎಸೆಯದೇ ಇದ್ದಿದ್ದರೆ ರಾಹುಲ್ ಗಾಂಧಿ ಅನರ್ಹರಾಗುತ್ತಿರಲಿಲ್ಲ ಎಂಬ ಅಭಿಪ್ರಾಯ ವ್ಯಕ್ತವಾಗಿದೆ.

ಕಳಂಕಿತ ಸಂಸದರು ಮತ್ತು ಶಾಸಕರ ಸದಸ್ಯತ್ವ ಅನರ್ಹಗೊಳಿಸುವ ಸಂಬಂಧವಾಗಿ ಸುಪ್ರೀಂ ಕೋರ್ಟ್ ಪ್ರಕಟಿಸಿದ ತೀರ್ಪು ರಾಜಕೀಯ ಪಕ್ಷಗಳಿಗೆ ಸಂಕಷ್ಟ ತಂದಿಟ್ಟಿತ್ತು. ಈ ತೀರ್ಪನ್ನು ಜಾರಿಗೊಳಿಸದೇ ಇರಲು ಪ್ರಜಾಪ್ರತಿನಿಧಿ ಕಾಯ್ದೆಗೆ ತಿದ್ದುಪಡಿ ತರಬೇಕೆಂದು ಯುಪಿಎ ಬೆಂಬಲಿತ ಪಕ್ಷಗಳಿಂದಲೇ ವಿಪರೀತ ಒತ್ತಡ ಬಂದಿತ್ತು.

ಈ ಒತ್ತಡಕ್ಕೆ ಮಣಿದ ಪ್ರಧಾನಿ ಮನಮೋಹನ್ಸಿಂಗ್ ನೇತೃತ್ವದ ಸರ್ಕಾರ ಸುಗ್ರೀವಾಜ್ಞೆ ಹೊರಡಿಸುವ ಮೂಲಕ ಯಾವುದೇ ಜನಪ್ರತಿನಿಧಿಗೆ ಶಿಕ್ಷೆಯಾದರೆ ಅವರು ಅದರ ವಿರುದ್ಧ ಮೇಲ್ಮನವಿ ಸಲ್ಲಿಸಲು 90 ದಿನಗಳ ಅವಕಾಶ ಕಲ್ಪಿಸಿತ್ತು.  

ಸುಗ್ರೀವಾಜ್ಞೆ ಹೊರಡಿಸುತ್ತಿದ್ದಂತೆ ಕಳಂಕಿತ ಸಂಸದರ ರಕ್ಷಣೆಗೆ ಸರ್ಕಾರ ಮುಂದಾಗಿದೆ ಎಂಬ ಟೀಕೆ ವ್ಯಕ್ತವಾಯಿತು. ಸರ್ಕಾರದ ಆತುರದ ಕ್ರಮವನ್ನು ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಪ್ರಶ್ನಿಸಿದರು. ದೇಶದೆಲ್ಲೆಡೆ ಭಾರೀ ಚರ್ಚೆ ಆಗುತ್ತಿದ್ದಂತೆ ರಾಹುಲ್ ಗಾಂಧಿ ಮಧ್ಯ ಪ್ರವೇಶ ಮಾಡಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಜನವರಿ 6 ಕ್ಕೆ ಡಿಕೆ ಶಿವಕುಮಾರ್ ಸಿಎಂ: ಇಕ್ಬಾಲ್ ಹುಸೇನ್ ಮಾತಿಗೆ ಡಿಕೆಶಿ ಹೇಳಿದ್ದೇನು

ತಿರುವನಂತಪುರಂನಲ್ಲಿ ಮೊದಲ ಬಾರಿಗೆ ಬಿಜೆಪಿ ಗೆಲುವು

ಕಾಂಗ್ರೆಸ್ಸಿಗೆ ಯತೀಂದ್ರ ಹೈಕಮಾಂಡ್ ಆಗಿದ್ದಾರಾ: ವಿಜಯೇಂದ್ರ

ಡಿಕೆ ಶಿವಕುಮಾರ್ ಸಿಎಂ ಆಗುವ ದಿನಾಂಕ ಫಿಕ್ಸ್: ಸ್ಪೋಟಕ ಹೇಳಿಕೆ ನೀಡಿದ ಆಪ್ತ ಶಾಸಕ

ದಲಿತರಿಗೆ ಮೀಸಲಾಗಿದ್ದ 25,000 ಕೋಟಿ ಗ್ಯಾರಂಟಿಗೆ ಬಳಕೆ: ಒಪ್ಪಿಕೊಂಡ ಸಚಿವ ಮಹದೇವಪ್ಪ

ಮುಂದಿನ ಸುದ್ದಿ
Show comments