Webdunia - Bharat's app for daily news and videos

Install App

ತಮಿಳುನಾಡಿನಲ್ಲಿ ಅಕ್ರಮ ಮದ್ಯ ಸೇವನೆ ಪ್ರಕರಣ, ಮೃತರ ಸಂಖ್ಯೆ 47ಕ್ಕೆ ಏರಿಕೆ

Sampriya
ಶುಕ್ರವಾರ, 21 ಜೂನ್ 2024 (14:56 IST)
ಚೆನ್ನೈ: ರಾಜ್ಯದ ಕಲ್ಲಕುರಿಚಿ ಜಿಲ್ಲೆಯಲ್ಲಿ ಅಕ್ರಮ ಮದ್ಯ ಸೇವಿನೆ ಪ್ರಕರಣದಲ್ಲಿ ಮೃತರ ಸಂಖ್ಯೆ 47ಕ್ಕೆ ಏರಿಕೆಯಾಗಿದೆ ಎಂದು ತಮಿಳುನಾಡು ವೈದ್ಯಕೀಯ ಶಿಕ್ಷಣ ನಿರ್ದೇಶಕ ಸಂಗುಮಣಿ ಶುಕ್ರವಾರ ತಿಳಿಸಿದ್ದಾರೆ.

ತಮಿಳುನಾಡು ವಿಧಾನಸಭೆಯ ಎರಡನೇ ದಿನದ ಅಧಿವೇಶನ ಶುಕ್ರವಾರ ಚೆನ್ನೈನಲ್ಲಿ ಗದ್ದಲದಿಂದ ಪ್ರಾರಂಭವಾಯಿತು. ಎಐಎಡಿಎಂಕೆ ಶಾಸಕರು ಕಪ್ಪು ಬಟ್ಟೆಗಳನ್ನು ಧರಿಸಿ ಸದನದೊಳಗೆ ಕಲಕುರಿಚಿಯಲ್ಲಿ ನಡೆದ ಹೂಚ್ ದುರಂತದ ಕುರಿತು ಘೋಷಣೆಗಳನ್ನುಕೂಗಿದರು.

47 ಮಂದಿ ಪ್ರಾಣ ಕಳೆದುಕೊಂಡಿರುವ ಕಳ್ಳಕುರಿಚಿ ಅಕ್ರಮ ಮದ್ಯ ದುರಂತದ ಕುರಿತು ಚರ್ಚೆಗೆ ಆಗ್ರಹಿಸಿ ಎಐಎಡಿಎಂಕೆ ಸದಸ್ಯರು ಘೋಷಣೆಗಳನ್ನು ಕೂಗುತ್ತಿದ್ದಂತೆ ಚೆನ್ನೈನಲ್ಲಿ ತಮಿಳುನಾಡು ವಿಧಾನಸಭೆಯ ಒಳಗೆ ಮತ್ತು ಹೊರಗೆ ಗೊಂದಲದ ವಾತಾವರಣ ಉಂಟಾಯಿತು.

ಕಲ್ಲಾಕುರಿಚಿಯಲ್ಲಿ ನಕಲಿ ಮದ್ಯ ಸೇವಿಸಿ ಮೃತಪಟ್ಟವರಿಗೆ ಶ್ರದ್ಧಾಂಜಲಿ ಸಲ್ಲಿಸುವ ಮೂಲಕ ನಿನ್ನೆ ರಾಜ್ಯ ವಿಧಾನಸಭೆಯ ಅಧಿವೇಶನ ಕೊನೆಗೊಂಡಿತು.

ಜೂನ್ 29ರವರೆಗೆ ವಿಧಾನಸಭೆ ಅಧಿವೇಶನ ನಡೆಯಲಿದೆ. ಇಂದು ಮುಂಜಾನೆ, ಕಲ್ಲಕುರಿಚಿ ಅಕ್ರಮ ಮದ್ಯ ಪ್ರಕರಣದ ಮೂವರು ಆರೋಪಿಗಳನ್ನು 15 ದಿನಗಳ ನ್ಯಾಯಾಂಗ ಬಂಧನಕ್ಕೆ ಕಳುಹಿಸಲಾಗಿದ್ದು, ಕೂಡಲೂರು ಕೇಂದ್ರ ಕಾರಾಗೃಹಕ್ಕೆ ಕರೆದೊಯ್ಯಲಾಗಿದೆ. ಕಲ್ಲಾಕುರಿಚಿ ಪೊಲೀಸರು ಆರೋಪಿಯನ್ನು ಜಿಲ್ಲಾ ಸಂಯೋಜಿತ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments