Publish Date: Wed, 29 Nov 2023 (11:52 IST)
Updated Date: Wed, 29 Nov 2023 (11:54 IST)
ಪತಿಯ ಮನೆಯಿಂದ ಓಡಿಹೋಗಿದ್ದ ಮಹಿಳೆ, ತನ್ನ ಪ್ರಿಯಕರನೊಂದಿಗೆ ವಾಸಿಸುತ್ತಿದ್ದಳು. ಇಂದು ಕೆಲ ವೈಯಕ್ತಿಕ ಕಾರಣಗಳಿಗಾಗಿ ಪರಸ್ಪರರಲ್ಲಿ ವಾಗ್ವಾದ ನಡೆದಿದೆ. ಕೋಪದ ಭರದಲ್ಲಿ ಆರೋಪಿ ಹರಿತವಾದ ಆಯುಧದಿಂದ ಆಕೆಯ ಮೇಲೆ ಹಲ್ಲೆ ಮಾಡಿದ್ದರಿಂದ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾಳೆ ಎನ್ನಲಾಗಿದೆ. ಪೊಲೀಸರು ಆರೋಪಿಯ ಪತ್ತೆಗಾಗಿ ಜಾಲ ಬೀಸಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಕೆಲ ವೈಯಕ್ತಿಕ ಕಾರಣಗಳ ಹಿನ್ನೆಲೆಯಲ್ಲಿ ಮಹಿಳೆಯೊಬ್ಬಳನ್ನು ಆಕೆಯ ಪ್ರಿಯಕರನೇ ಹತ್ಯೆಗೈದ ದಾರುಣ ಘಟನೆ ಬಾರ್‌ಮಾಸಿಯಾ ಪ್ರದೇಶದಲ್ಲಿ ವರದಿಯಾಗಿದೆ.
ಕಳೆದ ಹಲವು ವರ್ಷಗಳ ಹಿಂದೆ ಪತಿಗೆ ವಿಚ್ಚೇದನ ನೀಡದ ಜ್ಯೋತಿ, ಪತ್ನಿ ಮತ್ತು ಐದು ಮಕ್ಕಳ ತಂದೆಯಾದ ಅಶೋಕ್‌ನೊಂದಿಗೆ ಅನೈತಿಕ ಸಂಬಂಧ ಹೊಂದಿದ್ದಳು ಎಂದು ಮೂಲಗಳು ತಿಳಿಸಿವೆ. ಘಟನೆಯ ನಂತರ ಆರೋಪಿಪರಾರಿಯಾಗಿದ್ದು, ಹತ್ಯೆಯಾದ ಮಹಿಳೆಯ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೊಳಪಡಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಆರೋಪಿ ಬಂಧನಕ್ಕೆ ಜಾಲ ಬೀಸಲಾಗಿದ್ದು, ಶೀಘ್ರದಲ್ಲಿ ಬಂಧಿಸುವ ವಿಶ್ವಾಸವಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.