ಈಗಾಗಲೇ ವರ್ಧಾ ಚಂಡಮಾರುತಕ್ಕೆ ತತ್ತರಿಸಿದ್ದ ಆಂಧ್ರಪ್ರದೇಶ ಮತ್ತು ತಮಿಳುನಾಡಿಗೆ ರಾಷ್ಟ್ರೀಯ ವಿಪತ್ತು ಪಡೆ 'ಫೆಥಾಯ್' ಚಂಡಮಾರುತದ ಮುನ್ಸೂಚನೆ ನೀಡಿದೆ. ಬಂಗಾಳಕೊಲ್ಲಿಯಲ್ಲಿ ಅಪ್ಪಳಿಸಿರುವ 'ಫೆಥಾಯ್' ಚಂಡಮಾರುತ ಈಗ ಆಂಧ್ರ ಮತ್ತು ಚೆನ್ನೈನ ತಮಿಳುನಾಡಿನ ಕರಾವಳಿ ಪ್ರದೇಶಗಳ ಕಡೆಗೆ ಸಾಗುತ್ತಿದೆ. ಈ ಹಿನ್ನಲೆಯಲ್ಲಿ ಮುನ್ನೆಚ್ಚರಿಕೆ ಕ್ರಮಕೈಗೊಳ್ಳುವಂತೆ ರಾಷ್ಟ್ರೀಯ ವಿಪತ್ತು ಪಡೆ ಎಚ್ಚರಿಕೆ ನೀಡಿದೆ.
ದಕ್ಷಿಣ ಆಂಧ್ರಪ್ರದೇಶ, ಉತ್ತರ ತಮಿಳುನಾಡು ಮತ್ತು ಪುದುಚೇರಿ ಕರಾವಳಿಯಲ್ಲಿ 45-55 ಕಿ.ಮೀ. ಮತ್ತು 65 ಕಿ.ಮೀ. ವೇಗದಲ್ಲಿ ಚಂಡಮಾರುತ ಧಾವಿಸಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ತಿಳಿಸಿದೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ.