Publish Date: Thu, 11 Jan 2018 (10:00 IST)
Updated Date: Thu, 11 Jan 2018 (10:05 IST)
ದೆಹಲಿ : ಪ್ರಧಾನಿ ಮೋದಿ ಅವರು ಗುರುವಾರ(ಇಂದು) ಸಂಜೆ ದೆಹಲಿಯಲ್ಲಿ ಬಿಜೆಪಿ ನಾಯಕರೊಂದಿಗೆ ಮಹತ್ವದ ಸಭೆ ನಡೆಸಲಿದ್ದಾರೆ.
ದೆಹಲಿಯಲ್ಲಿ ನಡೆಯಲಿರುವ ಈ ಸಭೆಗೆ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ, ಪಕ್ಷದ ಹಿರಿಯ ನಾಯಕರು ಹಾಗು ಬಿಜೆಪಿ ಪ್ರಧಾನ ಕಾರ್ಯದರ್ಶಿಗಳು ಆಗಮಿಸಲಿದ್ದಾರೆ. ಪ್ರಧಾನಿ ಮೋದಿ ಅವರು ಬಿಜೆಪಿ ನಾಯಕರಿಗೆ ವಿಶೇಷ ಔತಣಕೂಟ ಕೂಟ ಏರ್ಪಡಿಸಲಿದ್ದಾರೆ. ಸಭೆಯಲ್ಲಿ ಪ್ರಧಾನಿ ಮೋದಿ ಅವರು ಮುಂಬರುವ ಕರ್ನಾಟಕದ ವಿಧಾನ ಸಭಾ ಚುನಾವಣೆಯ ಬಗ್ಗೆ, ಫ್ರೆ.1 ರಂದು ಮಂಡಿಸಲಿರುವ ಕೇಂದ್ರ ಬಜೆಟ್ ಬಗ್ಗೆ, ಹಾಗು ಸದ್ಯದ ರಾಜಕೀಯದ ಬಗ್ಗೆ ಮಹತ್ವದ ಚರ್ಚೆ ಮಾಡುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ