ಪಶ್ಚಿಮ ಬಂಗಾಳದಲ್ಲಿ ರಾಷ್ಟ್ರಪತಿ ಆಳ್ವಿಕೆ ಹೇರಿ: ಮಿಥುನ್ ಚಕ್ರವರ್ತಿ

Sampriya
ಶನಿವಾರ, 19 ಏಪ್ರಿಲ್ 2025 (16:04 IST)
Photo Credit X
ನವದೆಹಲಿ:  ಮುರ್ಷಿದಾಬಾದ್‌ನಲ್ಲಿ ಇತ್ತೀಚಿನ ಹಿಂಸಾಚಾರವನ್ನು ಗಮನದಲ್ಲಿಟ್ಟುಕೊಂಡು, ಪಶ್ಚಿಮ ಬಂಗಾಳದ ಬಿಜೆಪಿ ನಾಯಕ ಮಿಥುನ್ ಚಕ್ರವರ್ತಿ ರಾಜ್ಯದಲ್ಲಿ ರಾಷ್ಟ್ರಪತಿ ಆಳ್ವಿಕೆಯನ್ನು ಹೇರಬೇಕೆಂದು ಒತ್ತಾಯಿಸಿದ್ದಾರೆ.

ವಕ್ಫ್ (ತಿದ್ದುಪಡಿ) ಕಾಯ್ದೆ ವಿರುದ್ಧದ ಪ್ರತಿಭಟನೆಯಿಂದ ಪ್ರಚೋದಿತವಾದ ಮುರ್ಷಿದಾಬಾದ್ ಜಿಲ್ಲೆಯಲ್ಲಿ ಒಂದು ವಾರದ ಹಿಂಸಾಚಾರದ ನಂತರ ರಾಜ್ಯದಲ್ಲಿ ಕಾನೂನು ಮತ್ತು ಸುವ್ಯವಸ್ಥೆಯ ಪರಿಸ್ಥಿತಿಯ ಬಗ್ಗೆ ಕಳವಳ ವ್ಯಕ್ತಪಡಿಸಿದ ನಟ ಮತ್ತು ಬಿಜೆಪಿ ನಾಯಕ ಮಿಥುನ್ ಚಕ್ರವರ್ತಿ ಅವರು ಪಶ್ಚಿಮ ಬಂಗಾಳದಲ್ಲಿ ರಾಷ್ಟ್ರಪತಿ ಆಳ್ವಿಕೆ ಹೇರುವ ಬಗ್ಗೆ ಕೇಂದ್ರವನ್ನು ಒತ್ತಾಯಿಸಿದ್ದಾರೆ.

"ನಾನು ಹಲವು ಬಾರಿ ಮನವಿ ಮಾಡಿದ್ದೇನೆ ಮತ್ತು ನಾನು ಇನ್ನೂ ಗೃಹ ಸಚಿವರಿಗೆ ಮನವಿ ಮಾಡುತ್ತಿದ್ದೇನೆ. ಕನಿಷ್ಠ ಪಕ್ಷ, ದಯವಿಟ್ಟು ಚುನಾವಣೆಯ ಸಮಯದಲ್ಲಿ ಎರಡು ತಿಂಗಳ ಕಾಲ ಮಿಲಿಟರಿಯನ್ನು ಒಳಗೆ ನಿಯೋಜಿಸಿ. ಅವರನ್ನು ನಿಯೋಜಿಸಿದರೆ, ನಂತರ ನ್ಯಾಯಯುತ ಚುನಾವಣೆ ನಡೆಯುತ್ತದೆ ಎಂದು ಅಭಿಪ್ರಾಯ ಹೊರಹಾಕಿದರು.

ಏಪ್ರಿಲ್ 8 ರಿಂದ 12 ರವರೆಗೆ ಹಲವಾರು ಮುಸ್ಲಿಂ-ಬಹುಸಂಖ್ಯಾತ ಪಟ್ಟಣಗಳಾದ ಶಂಶೇರ್‌ಗಂಜ್, ಸುತಿ, ಧುಲಿಯನ್ ಮತ್ತು ಜಂಗೀಪುರದಲ್ಲಿ ಕೋಮು ಘರ್ಷಣೆಗಳ ನಡುವೆ ನಟ ತಮ್ಮ ಅಭಿಪ್ರಾಯವನ್ನು ಹೇಳಿದರು. ಈ ಹಿಂಸಾಚಾರದಿಂದ ಮೂವರು ಸಾವನ್ನಪ್ಪಿದ್ದು, ಹಲವಾರು ಮಂದಿ ಅರೆಸ್ಟ್ ಆಗಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದೇವೇಗೌಡರ ಮಕ್ಕಳು ನನ್ನ ಸಿಎಂ ಆಗಲು ಬಿಡ್ತಿರಲಿಲ್ಲ ಎಂದಿದ್ದ ಸಿದ್ದರಾಮಯ್ಯಗೆ ಜೆಡಿಎಸ್ ತಿರುಗೇಟು

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

ಮನುಷ್ಯನ ಆರೋಗ್ಯಕ್ಕೆ ಮುಖ್ಯವಾಗಿ ಬೇಕಾಗಿದ್ದು ಇದೇ ಅಂತಾರೆ ಡಾ ಸಿಎನ್ ಮಂಜುನಾಥ್

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಕೊನೆಗೂ ಅರೆಸ್ಟ್ ಆದ ಬೆಂಗಳೂರು ದರೋಡೆಕೋರರು: ಎಷ್ಟು ಹಣ ಸಿಕ್ತು ಇಲ್ಲಿದೆ ವಿವರ

ಮುಂದಿನ ಸುದ್ದಿ
Show comments