Select Your Language

Notifications

webdunia
webdunia
webdunia
webdunia

ಅಗಸ್ತಾ ಹಗರಣ: ಸುಬ್ರಹ್ಮಣ್ಯಂ ಸ್ವಾಮಿ ವಿರುದ್ಧ ಕಾಂಗ್ರೆಸ್‌ನಿಂದ ಹಕ್ಕುಚ್ಯುತಿ ನೋಟಿಸ್

ಅಗಸ್ತಾ ಹಗರಣ: ಸುಬ್ರಹ್ಮಣ್ಯಂ ಸ್ವಾಮಿ ವಿರುದ್ಧ ಕಾಂಗ್ರೆಸ್‌ನಿಂದ ಹಕ್ಕುಚ್ಯುತಿ ನೋಟಿಸ್
ನವದೆಹಲಿ , ಮಂಗಳವಾರ, 17 ಮೇ 2016 (20:18 IST)
ಅಗಸ್ತಾ ವೆಸ್ಟ್‌ಲ್ಯಾಂಡ್ ಹಗರಣಕ್ಕೆ ಸಂಬಂಧಿಸಿದಂತೆ ವೆಬ್‌ಸೈಟ್ ವರದಿಯನ್ನು ಕಾನೂನುಬಾಹಿರವಾಗಿ ಸಂಸತ್ತಿನಲ್ಲಿ ಮಂಡಿಸಿ ಸೋನಿಯಾ ಗಾಂಧಿ ಸೇರಿದಂತೆ ಹಲವರ ವಿರುದ್ಧ ಆರೋಪ ಮಾಡಿದ ಬಿಜೆಪಿ ಮುಖಂಡ ಸುಬ್ರಹ್ಮಣ್ಯಂ ಸ್ವಾಮಿ ವಿರುದ್ಧ ಕಾಂಗ್ರೆಸ್ ಹಿರಿಯ ಮುಖಂಡ ಸಂಸದ ಶಾಂತಾರಾಮ್ ನಾಯಕ್ ಹಕ್ಕು ಚ್ಯುತಿ ನೋಟಿಸ್ ಜಾರಿಗೊಳಿಸಿದ್ದಾರೆ.
  
ರಾಜ್ಯಸಭೆಯ ಸಭಾಪತಿ ಹಮೀದ್ ಅನ್ಸಾರಿಯವರಿಗೆ ಕಳುಹಿಸಿದ ನೋಟಿಸ್‌ನಲ್ಲಿ, ಸ್ವಾಮಿ ವೆಬ್‌ಸೈಟ್‌ನಲ್ಲಿ ಪ್ರಕಟಗೊಂಡ ವರದಿಗೆ ಕಾನೂನಿನಲ್ಲಿ ಯಾವುದೇ ಮಾನ್ಯತೆಯಿರದಿದ್ದರೂ ಸಂಸತ್ತಿನಲ್ಲಿ ಮಂಡಿಸಿ ಸೋನಿಯಾ ಗಾಂಧಿ, ಅಹ್ಮದ್ ಪಟೇಲ್, ಆಸ್ಕರ್ ಫರ್ನಾಂಡಿಸ್ ಅವರ ವಿರುದ್ಧ ಸುಳ್ಳು ಆರೋಪಗಳನ್ನು ಮಾಡಿದ್ದಾರೆ ಎಂದು ತಿರುಗೇಟು ನೀಡಿದ್ದಾರೆ.   
 
ಸಂಸತ್ತಿನ ಕಾಯ್ದೆ 187 ಮತ್ತು 188ರ ಅಡಿಯಲ್ಲಿ ರಾಜ್ಯಸಭೆಯ ಸಭಾಪತಿಯವರಿಗೆ ನೋಟಿಸ್ ಕಳುಹಿಸಿದ್ದು, ಹಕ್ಕುಚ್ಯುತಿ ಸಮಿತಿಗೆ ಶಿಫಾರಸ್ಸು ಮಾಡಿ ಬಿಜೆಪಿ ಮುಖಂಡ ಸುಬ್ರಹ್ಮಣ್ಯಂ ಸ್ವಾಮಿ ವಿರುದ್ಧ ಕ್ರಮ ಕೈಗೊಳ್ಳುವಂತೆ ಕಾಂಗ್ರೆಸ್ ಸಂಸದ ಶಾಂತಾರಾಮ್ ನಾಯಕ್ ಕೋರಿದ್ದಾರೆ.

ವೆಬ್‌ದುನಿಯಾ ಮೊಬೈಲ್ ಆಪ್ (ಡೌನ್‌ಲೋಡ್) ಮಾಡಿಕೊಂಡು ತಾಜಾ ಸುದ್ದಿಗಳನ್ನು ಪಡೆಯಿರಿ.

Share this Story:

Follow Webdunia kannada

ಮುಂದಿನ ಸುದ್ದಿ

ಇರಾಕ್ ಯುದ್ಧ: ಭಯಾನಕ ಕೃತ್ಯಕ್ಕಾಗಿ ಟೋನಿ ಬ್ಲೇರ್‌‌ಗೆ ಟ್ರಂಪ್ ಖಂಡನೆ