Webdunia - Bharat's app for daily news and videos

Install App

ಮಹಾಕುಂಭಮೇಳಕ್ಕೆ ತೆರಳುವವರ ಸಂಖ್ಯೆ ಹೆಚ್ಚಳ: ಮಧ್ಯಪ್ರದೇಶದ ಮುಖ್ಯಮಂತ್ರಿಯಿಂದ ವಿಶೇಷ ಮನವಿ

Sampriya
ಸೋಮವಾರ, 10 ಫೆಬ್ರವರಿ 2025 (16:20 IST)
Photo Courtesy X
ಭೋಪಾಲ್‌: ಇದೇ 26ಕ್ಕೆ ಕೊನೆಗೊಳ್ಳುವ ಪ್ರಯಾಗ್‌ರಾಜ್‌ನಲ್ಲಿ ನಡೆಯುತ್ತಿರುವ ಕುಂಭಮೇಳಕ್ಕೆ ತೆರಳುವವರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗಿದ್ದು,  ಇದರಿಂದಾಗಿ ಮಧ್ಯಪ್ರದೇಶದ ಹಲವು ಜಿಲ್ಲೆಗಳಲ್ಲಿ ಭಾರಿ ಪ್ರಮಾಣದ ವಾಹನ ದಟ್ಟಣೆ ಉಂಟಾಗುತ್ತಿದೆ.

ಈ ಬಗ್ಗೆ ಮಾತನಾಡಿರುವ ಮುಖ್ಯಮಂತ್ರಿ ಮೋಹನ್‌ ಯಾದವ್‌ ಅವರು, ಮುಂದಿನ ಕೆಲವು ದಿನಗಳ ಕಾಲ ಮಧ್ಯಪ್ರದೇಶ ಮಾರ್ಗದ ಮೂಲಕ ಪ್ರಯಾಗ್‌ರಾಜ್‌ಗೆ ತೆರಳಬೇಡಿ ಎಂದು ಜನರಲ್ಲಿ ಮನವಿ ಮಾಡಿದ್ದಾರೆ.

ಪಿಟಿಐ ಜತೆ ಮಾತನಾಡಿದ ಅವರು, ಕಳೆದ ಕೆಲವು ದಿನಗಳಿಂದ ಜಬಲ್ಪುರ, ಕತ್ನಿ, ರೇವಾ, ಸತ್ನಾ, ಸಿಯೋನಿ, ಮೈಹರ್‌ ಜಿಲ್ಲೆಗಳ ಮೂಲಕ ಹಲವು ವಾಹನಗಳು ಹಾದುಹೋಗುತ್ತಿದ್ದು, ಭಾರಿ ದಟ್ಟಣೆ ಉಂಟಾಗುತ್ತಿದೆ. ಹೀಗಾಗಿ ಈ ಮಾರ್ಗದಲ್ಲರಿ ಪ್ರಯಾಗ್‌ರಾಜ್‌ಗೆ ತೆರಳಬೇಡಿ ಎಂದಿದ್ದಾರೆ.

ಯಾವುದೇ ಕಾರಣಕ್ಕೂ ಹೊರಡುವ ಮುನ್ನ ಗೂಗಲ್‌ ಮ್ಯಾಪ್‌ನಲ್ಲಿ ಪರೀಕ್ಷಿಸಿಕೊಳ್ಳಿ, ಟ್ರಾಫಿಕ್‌ ಹೆಚ್ಚಿರುವ ದಾರಿಗಳನ್ನು ಆಯ್ಕೆ ಮಾಡಿಕೊಳ್ಳಬೇಡಿ ಎಂದು ಜನರಲ್ಲಿ ವಿನಂತಿಸಿಕೊಳ್ಳುತ್ತೇನೆ ಎಂದಿದ್ದಾರೆ.

ಮಹಾಕುಂಭ ಮೇಳದಲ್ಲಿ ಭಾಗವಹಿಸುವ ಜನರು ನಮ್ಮ ರಾಜ್ಯದ ಮೂಲಕ ಸಾಗುತ್ತಿರುವುದು ಸಂತೋಷದ ವಿಷಯ, ಆದರೆ ವ್ಯವಸ್ಥೆ ಮಾಡುವುದೇ ಸವಾಲಿನ ಕೆಲಸವಾಗಿದೆ. ಪ್ರಯಾಗ್‌ರಾಜ್‌ ಆಡಳಿತದೊಂದಿಗೆ ಸಂಪರ್ಕದಲ್ಲಿದ್ದೇವೆ. ನಮ್ಮ ಸರ್ಕಾರ ಪ್ರಯಾಣಿಕರಿಗೆ ಆಹಾರ, ನೀರು ಸೇರಿ ಅಗತ್ಯ ವ್ಯವಸ್ಥೆಗಳನ್ನು ಮಾಡುತ್ತಿದೆ. ನಮ್ಮೊಂದಿಗೆ ಕೆಲವು ಸಾಮಾಜಿಕ ಸಂಸ್ಥೆಗಳೂ ಕೈಜೋಡಿಸಿವೆ ಎಂದು ಮಾಹಿತಿ ನೀಡಿದ್ದಾರೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments