Webdunia - Bharat's app for daily news and videos

Install App

ದೇಶದೆಲ್ಲೆಡೆ ತರಕಾರಿ ಬೆಲೆಯಲ್ಲಿ ಏರಿಕೆ! ಗಗನಕ್ಕೇರಿದ ಟೊಮೆಟೋ ಬೆಲೆ

Webdunia
ಗುರುವಾರ, 6 ಜುಲೈ 2023 (10:12 IST)
ನವದೆಹಲಿ :  ದೇಶದೆಲ್ಲೆಡೆ  ತರಕಾರಿ ಬೆಲೆಯಲ್ಲಿ ಏರಿಕೆಯಾಗಿದೆ. ದೆಹಲಿಯ ಹಾಗೂ ಉತ್ತರಪ್ರದೇಶದಲ್ಲಿ ಟೊಮೆಟೋ ಬೆಲೆ ಗಗನಕ್ಕೇರಿದೆ.
 
ಕಡಿಮೆ ದರದಲ್ಲಿ ಸಿಗುತ್ತಿದ್ದ ಟೊಮೆಟೋ ಕಳೆದ ಕೆಲ ದಿನಗಳಿಂದ 100ರ ಗಡಿ ದಾಟುತ್ತಿದೆ. ದೆಹಲಿಯ ಸಫಲ್ ಸ್ಟೋರ್ ನಲ್ಲಿ ಕೆ.ಜಿ ಟೊಮೆಟೋ 129 ರೂ.ಗೆ ಮಾರಾಟವಾದರೆ, ಉತ್ತರಪ್ರದೇಶದಲ್ಲಿ 150 ರೂ.ಗೆ ಮಾರಾಟವಾಗುತ್ತಿದೆ. ಬೆಲೆ ಏರಿಕೆಯಿಂದ ಗ್ರಾಹಕರು ತಬ್ಬಿಬ್ಬಾಗಿದ್ದಾರೆ.

ಉತ್ತರ ಪ್ರದೇಶ ಮತ್ತು ಹರಿಯಾಣದಂತಹ ನೆರೆಯ ರಾಜ್ಯಗಳಿಂದ ಪೂರೈಕೆ ಕಡಿಮೆಯಾದ ಕಾರಣ ದೆಹಲಿಯಲ್ಲಿ ಕೆಲ ದಿನಗಳಿಂದ ಟೊಮೆಟೋ ಬೆಲೆ ದ್ವಿಗುಣಗೊಂಡಿದೆ ಎಂದು ಹೇಳಲಾಗುತ್ತಿದೆ. ಉತ್ತರಪ್ರದೇಶದಲ್ಲಿಯೂ ಟೊಮೆಟೋ ದರದಲ್ಲಿ ಏರಿಕೆಯಾಗಿದ್ದು, ಕೆ.ಜಿಗೆ 150 ರೂ. ಆಗಿದೆ. ಇದರಿಂದ ಜನಸಾಮಾನ್ಯರು ಕಂಗಾಲಾಗಿದ್ದಾರೆ.  

ಇತ್ತ ಕರ್ನಾಟಕದ ಕೋಲಾರ, ಚಿಕ್ಕಬಳ್ಳಾಪುರ, ದೊಡ್ಡಬಳ್ಳಾಪುರ, ಸೇರಿದಂತೆ ಬೆಂಗಳೂರು ಸುತ್ತಮುತ್ತ ಭಾಗಗಳಲ್ಲಿ ಟೊಮೆಟೋ ಬೆಳೆ ನಾಶವಾಗಿದೆ. ಹೀಗಾಗಿ ದರದಲ್ಲಿ ಏರಿಕೆಯಾಗಿದೆ ಎನ್ನಲಾಗಿದೆ. ಉತ್ಪಾದನೆ ಕೊರತೆ, ತೀವ್ರವಾದ ಬಿಸಿಲು ಮತ್ತು ಮುಂಗಾರು ಆಗಮನ ವಿಳಂಬವಾಗಿದ್ದರಿಂದ ಟೊಮೆಟೋ ದರದಲ್ಲಿ ಏರಿಕೆಯಾಗಿದೆ ಎಂದು ರೈತರು ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments