Select Your Language

Notifications

webdunia
webdunia
webdunia
webdunia

ಕರ್ನಾಟಕ ಸೇರಿದಂತೆ ದೇಶದ ಬಹುತೇಕ ಜಲಾಶಯಗಳ ನೀರಿನ ಮಟ್ಟ ಹೆಚ್ಚಳ

Karnataka Dam

Sampriya

ನವದೆಹಲಿ , ಶುಕ್ರವಾರ, 30 ಆಗಸ್ಟ್ 2024 (20:04 IST)
Photo Courtesy X
ನವದೆಹಲಿ: ಈ ತಿಂಗಳ ಶುರುವಿನಂದ ವ್ಯಾಪಕ ಮಳೆಯಾಗುತ್ತಿರುವುದರಿಂದ ಕರ್ನಾಟಕ ಸೇರಿದಂತೆ ದೇಶದ ಹಲವು ರಾಜ್ಯಗಳಲ್ಲಿನ ಜಲಾಶಯಗಳಲ್ಲಿ ನೀರಿನ ಮಟ್ಟದಲ್ಲಿ ಗಣನೀಯ ಹೆಚ್ಚಳವಾಗಿದೆ ಎಂದು ಕೇಂದ್ರ ಜಲ ಆಯೋಗ ಹೇಳಿದೆ.

ಕಳೆದ ವರ್ಷಕ್ಕೆ ಹೋಲಿದರೆ ಇದೇ ಅವಧಿಯಲ್ಲಿ ಜಲಾಶಯಗಳ ನೀರಿನ ಮಟ್ಟದಲ್ಲಿ ಶೇ 126ರಷ್ಟು ಹೆಚ್ಚಳ ದಾಖಲಾಗಿದೆ. ಇದು, ಕಳೆದ 10 ವರ್ಷಗಳ ಸರಾಸರಿಗಿಂತ ಶೇ 119ರಷ್ಟು ಹೆಚ್ಚಳವಾಗಿದೆ. ಆಗಸ್ಟ್‌ 29ರಂದು ಸಂಗ್ರಹಿಸಿದ ಮಾಹಿತಿಯಂತೆ, ದೇಶದ ಜಲಾಶಯಗಳಲ್ಲಿ 144.333 ಶತಕೋಟಿ ಘನ ಮೀಟರ್‌(ಬಿಸಿಎಂ) ಇದೆ. ಇದು, ಜಲಾಶಯಗಳ ಒಟ್ಟು ಸಂಗ್ರಹ ಸಾಮರ್ಥ್ಯದ ಶೇ 80ರಷ್ಟಾಗಲಿದೆ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ.

ಇನ್ನೂ ವ್ಯಾಪಕ ಮಳೆ ಹಿನ್ನೆಲೆ ದಕ್ಷಿಣ ರಾಜ್ಯಗಳಾದ ಕರ್ನಾಟಕ, ಆಂಧ್ರಪ್ರದೇಶ, ತೆಲಂಗಾಣ, ಕೇರಳ, ತಮಿಳುನಾಡುಗಳಲ್ಲಿನ ಜಲಾಶಯಗಳಲ್ಲಿ ನೀರಿನ ಮಟ್ಟ ಗಣನೀಯವಾಗಿ ಹೆಚ್ಚಳವಾಗಿದೆ.

ಈ ರಾಜ್ಯಗಳಲ್ಲಿರುವ ಒಟ್ಟು 43 ಜಲಾಶಯಗಳಲ್ಲಿ 44.771 ಶತಕೋಟಿ ಘನ ಮೀಟರ್‌ನಷ್ಟು ನೀರು ಸಂಗ್ರಹವಾಗಿದೆ. ಇದು ಇವುಗಳ ಒಟ್ಟು ಸಂಗ್ರಹ ಸಾಮರ್ಥ್ಯದ ಶೇ 82ರಷ್ಟಾಗುವುದು ಎಂದು ಆಯೋಗದ ವರದಿಯಲ್ಲಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ತಮ್ಮ ಸ್ಥಾನವೇ ಅಲುಗಾಡುತ್ತಿರುವಾಗ ಸಿದ್ದರಾಮಯ್ಯ ಮೇಲೆ ಆರೋಪ ಮಾಡುತ್ತಿದ್ದಾರೆ