Publish Date: Tue, 22 Sep 2015 (12:15 IST)
Updated Date: Tue, 22 Sep 2015 (12:19 IST)
ವಿದ್ಯಾರ್ಥಿಗಳಲ್ಲಿ ಔಪಚಾರಿಕ ಶಿಕ್ಷಣದ ಜತೆಗೆ ಸಂಸ್ಕೃತಿ ಮತ್ತು ಮೌಲ್ಯಗಳನ್ನು ಮೈಗೂಡಿಸಿಕೊಳ್ಳುವುದಕ್ಕೆ ಪ್ರಾಮುಖ್ಯತೆ ನೀಡಬೇಕೆಂದು ಕೇಂದ್ರ ಸಚಿವ ಮನೋಜ್ ಸಿನ್ಹಾ ಪ್ರತಿಪಾದಿಸಿದ್ದು, ಇವೆರಡರ ಸಂಯೋಜನೆ ಅಗತ್ಯವಾಗಿದೆ ಎಂದಿದ್ದಾರೆ.
ಸ್ಪರ್ಧೆಯ ಈ ಶಕೆಯಲ್ಲಿ ಶಿಕ್ಷಣದಲ್ಲಿ ಬದಲಾವಣೆಗಳು ಅಗತ್ಯವಿದ್ದು, ಸ್ಪರ್ಧಾತ್ಮಕ ಜಗತ್ತಿನಲ್ಲಿ ತಮ್ಮ ಸ್ಥಾನವನ್ನು ಕಂಡುಕೊಳ್ಳಬೇಕು ಎಂದು ರೈಲ್ವೆ ಖಾತೆ ರಾಜ್ಯ ಸಚಿವ ಚಿತ್ತೊಗಢ್‌ನಲ್ಲಿ ಆಯೋಜಿಸಿದ್ದ ಸಮಾರಂಭದಲ್ಲಿ ಹೇಳಿದರು.
ಸಾಂಸ್ಕೃತಿಕ ಮೌಲ್ಯಗಳನ್ನು ವಿದ್ಯಾರ್ಥಿಗಳಲ್ಲಿ ರೂಢಿಸಬೇಕೆಂದು ಹೇಳಿದ ಅವರು ವಿದ್ಯಾರ್ಥಿಗಳು ಉದ್ಯಮಿಗಳಾಗುವ ಮೂಲಕ ಉಳಿದವರಿಗೆ ಉದ್ಯೋಗಾವಕಾಶಗಳನ್ನು ಕಲ್ಪಿಸಬೇಕೆಂದು ನುಡಿದರು. ಚಿತ್ತೋಗಢ್ ಸಂಸದ ಸಿ.ಪಿ. ಜೋಷಿ ಕೂಡ ಸಮಾರಂಭದಲ್ಲಿ ಹಾಜರಿದ್ದರು.