Select Your Language

Notifications

webdunia
webdunia
webdunia
webdunia

ಕ್ಯಾನ್ಸರ್ ಅತೀ ಹೆಚ್ಚು ಸಾವು: ಭಾರತಕ್ಕೆ 2ನೇ ಸ್ಥಾನ

ಕ್ಯಾನ್ಸರ್ ಅತೀ ಹೆಚ್ಚು ಸಾವು: ಭಾರತಕ್ಕೆ 2ನೇ ಸ್ಥಾನ
bengaluru , ಮಂಗಳವಾರ, 7 ಜೂನ್ 2022 (22:17 IST)
ಭಾರತದಲ್ಲಿ ಅತಿಹೆಚ್ಚು ಜನ ಸಾವಿಗೀಡಾಗುತ್ತಿರುವ ಕಾಯಿಲೆಗಳ ಪೈಕಿ ಕ್ಯಾನ್ಸರ್‌ ಎರಡನೇ ಸ್ಥಾನದಲ್ಲಿದೆ. ಹಲವು ರೀತಿಯ ಕ್ಯಾನ್ಸರ್‌ ಎಲ್ಲಾ ವಯೋಮಾನದವರಿಗೂ ಕಾಣಿಸಿಕೊಳ್ಳುತ್ತಿದ್ದು, ಜನರನ್ನು ಆರ್ಥಿಕವಾಗಿ ಕುಗ್ಗಿಸುವಂತೆ ಮಾಡುತ್ತಿದೆ.
ಕೆಲವು ಕಡೆ ಕ್ಯಾನ್ಸರ್‌ಗೆ ಸೂಕ್ತ ಚಿಕಿತ್ಸೆ ಲಭಿಸದೇ ಇರುವುದು ಸಹ ಸಾವಿಗೆ ಕಾರಣವಾಗುತ್ತಿದೆ.
ಕ್ಯಾನ್ಸರ್‌ಗೆ ಸೂಕ್ತ ಚಿಕಿತ್ಸೆ ನೀಡುತ್ತಾ, ಜನರ ಮೆಚ್ಚುಗೆಗೆ ಪಾತ್ರರಾಗಿ ಬಂದಿರುವ ಟಾಟಾ ಟ್ರಸ್ಟ್‌, ಕ್ಯಾನ್ಸರ್‌ ಆರೈಕೆಯಲ್ಲಿ ಮುಂಚೂಣಿಯಲ್ಲಿದೆ. ಜೊತೆಗೆ ಡೀಮ್ಡ್‌ ಯೂನಿವರ್ಸಿಟಿ ಪಟ್ಟಿಗೆ ಸೇರಿರುವ ಯೆನೆಪೋಯಾ ಶೈಕ್ಷಣಿಕ ಸಂಸ್ಥೆಯು ಸಹ ವೈದ್ಯಕೀಯ ಕಾಲೇಜು ಹಾಗೂ ಆಸ್ಪತ್ರೆ ನಡೆಸುವ ಮೂಲಕ ಕಳೆದ ದಶಕದಿಂದ ಕ್ಯಾನ್ಸರ್‌ ರೋಗಿಗಳಿಗೆ ಕೈಗೆಟುಕುವ ದರದಲ್ಲಿ ವೈದ್ಯಕೀಯ ಚಿಕಿತ್ಸೆ ನೀಡುತ್ತಾ ಬಂದಿದೆ.
ಕ್ಯಾನ್ಸರ್‌ ರೋಗಿಗಳಿಗೆ ಕಡಿಮೆ ವೆಚ್ಚದಲ್ಲಿ ಚಿಕಿತ್ಸೆ ನೀಡುವ ಸಲುವಾಗಿ ಯೆನೆಪೋಯಾ ವಿಶ್ವವಿದ್ಯಾಲಯ  ಹಾಗೂ ಟಾಟಾ ಟ್ರಸ್ಟ್‌ನ ಸಹಯೋಗದಲ್ಲಿ ಇದೇ ಜೂನ್‌ ೧೧ ರಂದು ಮಂಗಳೂರಿನ ದೇರಳಕಟ್ಟೆಯಲ್ಲಿ ಅತ್ಯಾಧುನಿಕ ಜುಲೇಖಾ ಯೆನೆಪೋಯಾ ಆಂಕೊಲಾಜಿ ಸಂಸ್ಥೆಯನ್ನು ಉದ್ಘಾಟಿಸಲಾಗುತ್ತಿದೆ. ಆರೋಗ್ಯ ಸಚಿವರಾದ ಡಾ. ಕೆ ಸುಧಾಕರ್ ಸಂಸ್ಥೆಯನ್ನು ಉದ್ಘಾಟಿಸಲಿದ್ದಾರೆ. ಜೊತೆಗೆ ಕಡಿಮೆ ವೆಚ್ಚದಲ್ಲಿ ಕ್ಯಾನ್ಸರ್ ಚಿಕಿತ್ಸೆ ನೀಡಲಾಗ್ತದೆ.

Share this Story:

Follow Webdunia kannada

ಮುಂದಿನ ಸುದ್ದಿ

ಕ್ಯಾನ್ಸರ್‌ ರೋಗಿಗಳಿಗೆ ಕೈಗೆಟಕುವ ದರದಲ್ಲಿ ಚಿಕಿತ್ಸೆ ನೀಡಲು "ಜುಲೇಖಾ ಯೆನೆಪೋಯ ಆಂಕೊಲಾಜಿ ಸಂಸ್ಥೆ ಆರಂಭ*