ಭಾರತ ಹಿಂದೆಂದಿಗಿಂತ ಉತ್ತಮ ಸ್ಥಿತಿಯಲ್ಲಿದೆ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಹೇಳಿದ್ದಾರೆ.
ಪುಣೆಯಲ್ಲಿ ನಡೆದ ಕೌಶಲ್ ವಿಕಾಸ ಅಭಿಯಾನವನ್ನು ಉದ್ದೇಶಿಸಿ ಮಾತನಾಡುತ್ತಿದ್ದ ಅವರು ಭಾರತದ ಆರ್ಥಿಕತೆ ಸಾರ್ವಕಾಲಿಕ ಔನತ್ಯದಲ್ಲಿದೆ. ಮೋದಿ ಅವರು ಪ್ರಧಾನಿಯಾಗಿ ಅಧಿಕಾರ ಸ್ವೀಕರಿಸಿದಾಗ ದೇಶದ ಜನರು ಅಸಂಖ್ಯ ನಿರೀಕ್ಷೆಗಳನ್ನಿಟ್ಟುಕೊಂಡಿದ್ದರು. ಅದರಂತೆ ನಾವು ಈ ಎರಡು ವರ್ಷಗಳಲ್ಲಿ 100 ಬಿಲಿಯನ್ ಮೊತ್ತದ ಸಂಕೀರ್ಣ ಸಮಸ್ಯೆಗಳನ್ನು ಬಗೆಹರಿಸುವಲ್ಲಿ ಸಫಲರಾಗಿದ್ದೇವೆ ಎಂದು ಹೇಳಿದ್ದಾರೆ.
"ನಾವು ಸಮಸ್ಯೆಗಳನ್ನು ನಿಭಾಯಿಸಲು ನಾವು ಬಹು ಆಯಾಮದ ನೀತಿಯನ್ನು ಅಭಿವೃದ್ಧಿ ಪಡಿಸಿದೆವು. ಕೆಲವು ವರ್ಷಗಳ ಹಿಂದೆ ದೇಶದ ಆರ್ಥಿಕತೆಯನ್ನು ಈ ಮಟ್ಟದಲ್ಲಿ ಕಲ್ಪಿಸಲು ಸಾಧ್ಯವಿರಲಿಲ್ಲ ಎಂದು ಶಾ ಅಭಿಪ್ರಾಯ ಪಟ್ಟಿದ್ದಾರೆ.
ಸ್ಟ್ಯಾಂಡ್ ಅಪ್ ಇಂಡಿಯಾ, ಸ್ಟಾರ್ಟ್ ಅಪ್ ಇಂಡಿಯಾ, ಮೇಕ್ ಇನ್ ಇಂಡಿಯಾನಂತಹ ಯೋಜನೆಗಳಿಂದಾಗಿ ಭಾರತದ ಆರ್ಥಿಕತೆ ವಿಶ್ವ ಮಟ್ಟದಲ್ಲಿ ಅತಿ ವೇಗವಾಗಿ ಬೆಳೆಯುತ್ತಿದೆ ಎಂದು ಶಾ ಹೇಳಿದ್ದಾರೆ.
ಈ ಎಲ್ಲ ವಿಷಯಗಳು ಒಗ್ಗೂಡಿ ದೇಶದ ಆರ್ಥಿಕತೆ ಬಲಪಡಿಸಲು ನೆರವಾಗಿವೆ ಎಂದು ಶಾ ತಿಳಿಸಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ಮೊಬೈಲ್ ಆಪ್ ಡೌನ್‍ಲೋಡ್ ಮಾಡಿಕೊಳ್ಳಿ.