Select Your Language

Notifications

webdunia
webdunia
webdunia
webdunia

ಕಡಿಮೆ ದರದಲ್ಲಿ ರಷ್ಯಾದಿಂದ ಭಾರತ ತೈಲ ಖರೀದಿ

ಕಡಿಮೆ ದರದಲ್ಲಿ ರಷ್ಯಾದಿಂದ ಭಾರತ ತೈಲ ಖರೀದಿ
ನವದೆಹಲಿ , ಬುಧವಾರ, 14 ಡಿಸೆಂಬರ್ 2022 (14:23 IST)
ನವದೆಹಲಿ : ಜಿ7 ದೇಶಗಳು ನಿಗದಿ ಮಾಡಿದ ದರಕ್ಕಿಂತಲೂ ಕಡಿಮೆ ಬೆಲೆಯಲ್ಲಿ ಭಾರತ ರಷ್ಯಾದಿಂದ ಕಚ್ಚಾ ತೈಲವನ್ನು ಆಮದು ಮಾಡುತ್ತಿದೆ ಎಂದು ವರದಿಯಾಗಿದೆ.

ಪ್ರತಿ ಬ್ಯಾರೆಲ್ಗೆ ರಷ್ಯಾದ ಯುರಲ್ಸ್ ಕಚ್ಚಾ ತೈಲಕ್ಕೆ ಜಿ7 ದೇಶಗಳು 60 ಡಾಲರ್(4,900 ರೂ.) ನಿಗದಿ ಮಾಡಿವೆ. ಆದರೆ ಭಾರತ ಪ್ರತಿ ಬ್ಯಾರೆಲ್ ಕಚ್ಚಾ ತೈಲವನ್ನು 49 ಡಾಲರ್ಗೆ (4,000 ರೂ.) ಖರೀದಿಸುತ್ತಿದೆ.

ಪ್ರತಿ ಬ್ಯಾರೆಲ್ ಬ್ರೆಂಟ್ ಕಚ್ಚಾ ತೈಲ 79 ಡಾಲರ್ನಲ್ಲಿ ಮಾರಾಟವಾಗುತ್ತಿದೆ. ಜಿ7 ದೇಶಗಳ ನಿರ್ಧಾರವನ್ನು ಯಾರು ಬೆಂಬಲಿಸುತ್ತಾರೋ ಅವರಿಗೆ ನಾವು ತೈಲವನ್ನು ರಫ್ತು ಮಾಡುವುದಿಲ್ಲ ಎಂದು ರಷ್ಯಾ ಈಗಾಗಲೇ ತನ್ನ ನಿರ್ಧಾರ ತಿಳಿಸಿದೆ.

ಕೆನಡಾ, ಫ್ರಾನ್ಸ್, ಜರ್ಮನಿ, ಇಟಲಿ, ಜಪಾನ್, ಯುನೈಟೆಡ್ ಕಿಂಗ್ಡಮ್, ಅಮೆರಿಕ, ಯುರೋಪಿಯನ್ ಯೂನಿಯನ್ ಜೊತೆ ಆಸ್ಟ್ರೇಲಿಯಾ ಒಂದು ಬ್ಯಾರೆಲ್ ರಷ್ಯಾದ ಕಚ್ಚಾ ತೈಲಕ್ಕೆ 60 ಡಾಲರ್(49 ಸಾವಿರ ರೂ.) ದರವನ್ನು ನಿಗದಿ ಮಾಡಿದೆ. 

Share this Story:

Follow Webdunia kannada

ಮುಂದಿನ ಸುದ್ದಿ

ಹೊಟೇಲ್ ನಲ್ಲಿ ತಿಂಡಿ- ಊಟದ ದರ ಏರಿಕೆ- ಗ್ರಾಹಕರ ಜೇಬಿಗೆ ಕತ್ತರಿ