Publish Date: Fri, 10 Sep 2021 (10:23 IST)
Updated Date: Fri, 10 Sep 2021 (10:26 IST)
ನವದೆಹಲಿ : ಭಾರತದಲ್ಲಿ ದಿನದಿಂದ ದಿನಕ್ಕೆ ಕೊರೊನಾ ವೈರಸ್ ಸೋಂಕಿನ ಪ್ರಕರಣಗಳಲ್ಲಿ ಹೆಚ್ಚಳವಾಗುತ್ತಿದ್ದು, ಕಳೆದ 24 ಗಂಟೆಗಳಲ್ಲಿ 34,973 ಮಂದಿಗೆ ಹೊಸದಾಗಿ ಕೊರೊನಾ ಸೋಂಕು ದೃಢಪಟ್ಟಿದೆ.
ಕೇಂದ್ರ ಆರೋಗ್ಯ ಸಚಿವಾಲಯದ ಪ್ರಕಾರ, ಕಳೆದ 24 ಗಂಟೆಗಳಲ್ಲಿ 34,973 ಮಂದಿಗೆ ಹೊಸದಾಗಿ ಕೊರೊನಾ ಸೋಂಕು ದೃಢಪಟ್ಟಿದೆ. ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 3,31,74,954 ಕ್ಕೆ ಏರಿಕೆಯಾಗಿದೆ. ಕಳೆದ 24 ಗಂಟೆಗಳಲ್ಲಿ 260 ಮಂದಿ ಕೊರೊನಾ ಸೋಂಕಿತರು ಮೃತಪಟ್ಟಿದ್ದಾರೆ. ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 4,42,009 ಕ್ಕೆ ಏರಿಕೆಯಾಗಿದೆ.
ಕಳೆದ 24 ಗಂಟೆಗಳಲ್ಲಿ 37,681 ಕೊರೊನಾ ಸೋಂಕಿತರು ಚೇತರಿಕೆಯಾಗಿದ್ದು, ಒಟ್ಟು ಚೇತರಿಸಿಕೊಂಡವರ ಸಂಖ್ಯೆ 3,23,42,299 ಕ್ಕೆ ಏರಿಕೆಯಾಗಿದೆ. ಸದ್ಯ ದೇಶದಲ್ಲಿ 3,90, 646 ಸಕ್ರಿಯ ಪ್ರಕರಣಗಳಿವೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ.
ಸಕ್ರಿಯ ಪ್ರಕರಣಗಳು: 3,90,646
ಒಟ್ಟು ಪ್ರಕರಣಗಳು: 3,31,74,954
ಒಟ್ಟು ಚೇತರಿಕೆಗಳು: 3,23,42,299
ಸಾವಿನ ಸಂಖ್ಯೆ: 4,42,009
ಒಟ್ಟು ಲಸಿಕೆ: 72,37,84,586