Select Your Language

Notifications

webdunia
webdunia
webdunia
webdunia

Pak ವಿರುದ್ಧ ಪ್ರತೀಕಾರ ಶುರುಮಾಡಿದ ಭಾರತ: ಇಂದು ಮತ್ತೇ ಮೂವರು ಉಗ್ರರ ಮನೆ ನೆಲಸಮ

ಪಹಲ್ಗಾಮ್ ಭಯೋತ್ಪಾದನ ದಾಳಿ

Sampriya

ಜಮ್ಮು- ಕಾಶ್ಮೀರ , ಶನಿವಾರ, 26 ಏಪ್ರಿಲ್ 2025 (15:45 IST)
Photo Credit X
ಜಮ್ಮು- ಕಾಶ್ಮೀರ: ಪಹಲ್ಗಾಮ್‌ನಲ್ಲಿ ಮುಗ್ದ ಪ್ರವಾಸಿಗರ ಮೇಲೆ ದಾಳಿ ಮಾಡಿ, 26 ಜನರನ್ನು ಕೊಂದಿದ್ದಕ್ಕೆ ಈಗಾಗಲೇ ಭಾರತ ಹಲವು ಮಾರ್ಗಗಳಲ್ಲಿ ಪಾಕ್ ವಿರುದ್ಧ ಪ್ರತೀಕಾರವನ್ನು ತೀರಿಸಿಕೊಳ್ಳುತ್ತಿದೆ.

ಶುಕ್ರವಾರ ರಾತ್ರಿ ಜಮ್ಮು ಮತ್ತು ಕಾಶ್ಮೀರದಾದ್ಯಂತ ಲಷ್ಕರ್-ಎ-ತೊಯ್ಬಾ (ಎಲ್‌ಇಟಿ) ಕಮಾಂಡರ್ ಸೇರಿದಂತೆ ಐವರು ಭಯೋತ್ಪಾದಕರ ಮನೆಗಳನ್ನು ಧ್ವಂಸಗೊಳಿಸುವ ಮೂಲಕ ಪ್ರತ್ಯುತ್ತರವನ್ನು ನೀಡಲು ಶುರು ಮಾಡಿದೆ.

ಶೋಪಿಯಾನ್‌ನ ಚೋಟಿಪೋರಾ ಗ್ರಾಮದಲ್ಲಿ ಎಲ್‌ಇಟಿ ಕಮಾಂಡರ್ ಶಾಹಿದ್ ಅಹ್ಮದ್ ಕುಟ್ಟೆ ಮನೆಯನ್ನು ನೆಲಸಮಗೊಳಿಸಲಾಯಿತು ಮತ್ತು ಶಿಲಾಖಂಡರಾಶಿಗಳಿಗೆ ಇಳಿಸಲಾಯಿತು.

ಅಹ್ಮದ್‌ ಕುಟ್ಟೆ ಕಳೆದ ಮೂರು ನಾಲ್ಕು ವರ್ಷಗಳಿಂದ ಭಯೋತ್ಪಾದನೆ ಸಂಬಂಧಿತ ಚಟುವಟಿಕೆಗಳಲ್ಲಿ ಸಕ್ರಿಯರಾಗಿದ್ದಾರೆ ಮತ್ತು ದೇಶ ವಿರೋಧಿ ಕಾರ್ಯಾಚರಣೆಗಳನ್ನು ಸಂಘಟಿಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಶೋಪಿಯಾನ್‌ನ ಚೋಟಿಪೋರಾದ ಸಕ್ರಿಯ ಲಷ್ಕರ್-ಎ-ತೊಯ್ಬಾ ಭಯೋತ್ಪಾದಕ ಕಮಾಂಡರ್ ಶಾಹಿದ್ ಅಹ್ಮದ್ ಕುಟ್ಟಾಯ್ ಅವರ ಮನೆಯನ್ನು ಅಧಿಕಾರಿಗಳು ನೆಲಸಮಗೊಳಿಸಿದ್ದಾರೆ. ಶಾಹಿದ್ ಕಳೆದ 3-4 ವರ್ಷಗಳಿಂದ ಸಕ್ರಿಯರಾಗಿದ್ದು, ಹಲವಾರು ದೇಶ ವಿರೋಧಿ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದಾನೆ.

ಕುಲ್ಗಾಮ್‌ನ ಮತಾಲಂ ಪ್ರದೇಶದಲ್ಲಿ ಸಕ್ರಿಯ ಭಯೋತ್ಪಾದಕ ಜಾಹಿದ್ ಅಹ್ಮದ್‌ನ ಮತ್ತೊಂದು ಮನೆಯನ್ನು ಕೆಡವಲಾಗಿದೆ.

ಆದರೆ, ಪುಲ್ವಾಮಾದ ಮುರ್ರಾನ್ ಪ್ರದೇಶದಲ್ಲಿ ಭಯೋತ್ಪಾದಕ ಅಹ್ಸಾನ್ ಉಲ್ ಹಕ್ ಅವರ ಮನೆ ಸ್ಫೋಟದಿಂದ ನೆಲಸಮವಾಗಿದೆ. 2018ರಲ್ಲಿ ಪಾಕಿಸ್ತಾನದಲ್ಲಿ ಭಯೋತ್ಪಾದನಾ ತರಬೇತಿ ಪಡೆದಿದ್ದ ಅಹ್ಸಾನ್ ಇತ್ತೀಚೆಗಷ್ಟೇ ಮತ್ತೆ ಕಣಿವೆ ಪ್ರವೇಶಿಸಿದ್ದು, ಗುಪ್ತಚರ ಸಂಸ್ಥೆಗಳಲ್ಲಿ ಆತಂಕ ಮೂಡಿಸಿತ್ತು.

ಜೂನ್ 2023 ರಿಂದ ಸಕ್ರಿಯವಾಗಿರುವ ಎಲ್ಇಟಿ ಭಯೋತ್ಪಾದಕ ಎಹ್ಸಾನ್ ಅಹ್ಮದ್ ಶೇಖ್ ಅವರ ಮತ್ತೊಂದು ಎರಡು ಅಂತಸ್ತಿನ ಮನೆಯನ್ನು ಕಿತ್ತುಹಾಕಲಾಯಿತು.

Share this Story:

Follow Webdunia kannada

ಮುಂದಿನ ಸುದ್ದಿ

ಯುದ್ಧ ಬೇಡ ಅನ್ನೋ ಸಿದ್ದರಾಮಯ್ಯಗೆ ನಾಚಿಕೆ ಆಗಲ್ವಾ: ಆರ್ ಅಶೋಕ್