Publish Date: Tue, 03 May 2022 (16:36 IST)
Updated Date: Tue, 03 May 2022 (16:38 IST)
ದೇಶದಲ್ಲಿ ಕಳೆದ 24 ಗಂಟೆಯಲ್ಲಿ 2568 ಕೊರೊನಾ ಸೋಂಕು ಪ್ರಕರಣಗಳು ದೃಢಪಟ್ಟಿದ್ದು, 20 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ.
ಕೇಂದ್ರ ಆರೋಗ್ಯ ಸಚಿವಾಲಯ ಸೋಮವಾರ ನೀಡಿದ ಮಾಹಿತಿ ಪ್ರಕಾರ ದೇಶದಲ್ಲಿ ಹಿಂದಿನ ದಿನಕ್ಕೆ ಹೋಲಿಸಿದರೆ ಸೋಂಕು ಮತ್ತು ಸಾವಿನ ಪ್ರಮಾಣದಲ್ಲಿ ಕುಸಿತ ಕಂಡು ಬಂದಿದೆ.
ದೇಶದಲ್ಲಿ ಒಟ್ಟಾರೆ ಸೋಂಕಿತ ಸಂಖ್ಯೆ 4,30,84,913ಕ್ಕೆ ಏರಿಕೆಯಾದರೆ, ಸಾವಿನ ಸಂಖ್ಯೆ 5,23,889ಕ್ಕೆ ಜಿಗಿತ ಕಂಡಿದೆ. ಸಕ್ರಿಯ ಪ್ರಕರಣಗಳ ಸಂಖ್ಯೆ 19,137ಕ್ಕೆ ಜಿಗಿತ ಕಂಡಿದೆ.
ದೇಶದಲ್ಲಿ ಒಂದು ದಿನದಲ್ಲಿ 2911 ಮಂದಿ ಸೋಂಕಿನಿಂದ ಗುಣಮುಖಿತರಾಗಿದ್ದು, ಒಟ್ಟಾರೆ ಗುಣಮುಖಿತರಾದವರ ಸಂಖ್ಯೆ 4,25,41,887ಕ್ಕೆ ಆಗಿದೆ.