ನವದೆಹಲಿ: ಪಹಲ್ಗಾಮ್ ಉಗ್ರ ದಾಳಿ ಬಳಿಕ ಭಾರತ ಮತ್ತು ಪಾಕಿಸ್ತಾನ ನಡುವೆ ವ್ಯಾಪಾರ ವಾಣಿಜ್ಯ ವಹಿವಾಟುಗಳು ಬಂದ್ ಆಗಿದ್ದು ಭಾರತದಲ್ಲಿ ಡ್ರೈ ಫ್ರೂಟ್ಸ್ ಗಳ ಬೆಲೆ ಏರಿಕೆಯಾಗುವ ಸಾಧ್ಯತೆಯಿದೆ.
ಪಾಕಿಸ್ತಾನದಿಂದ ಭಾರತಕ್ಕೆ ಗೋಡಂಬಿ, ಬಾದಾಮಿ, ಪಿಸ್ತಾ, ಖರ್ಜೂರ, ಒಣದ್ರಾಕ್ಷಿ ಮುಂತಾದ ಡ್ರೈ ಫ್ರೂಟ್ಸ್ ಆಮದಾಗುತ್ತಿತ್ತು. ಆದರೆ ಈಗ ಉಭಯ ದೇಶಗಳ ನಡುವೆ ಈಗ ವ್ಯಾಪಾರ ಬಂದ್ ಆಗಿದ್ದು ಪಾಕಿಸ್ತಾನದಿಂದ ಆಮದಾಗುತ್ತಿದ್ದ ಡ್ರೈ ಫ್ರೂಟ್ಸ್ ಬಂದ್ ಆಗಿದೆ.
ಹೀಗಾಗಿ ಭಾರತದಲ್ಲಿ ಈಗ ಡ್ರೈ ಫ್ರೂಟ್ಸ್ ಬೆಲೆ ಏರಿಕೆಯಾಗುವ ಸಾಧ್ಯತೆಯಿದೆ ಎನ್ನಲಾಗಿದೆ. ಇದು ಮಾತ್ರವಲ್ಲದೆ ಗೋಧಿ, ದ್ವಿದಳ ಧಾನ್ಯಗಳು, ಸಿಮೆಂಟ್, ಹತ್ತಿ, ಸುಣ್ಣವೂ ಭಾರತಕ್ಕೆ ಆಮದಾಗಲ್ಲ. ಹೀಗಾಗಿ ಇವುಗಳ ಬೆಲೆಯಲ್ಲೂ ಏರಿಕೆಯಾಗುವ ಸಾಧ್ಯತೆಯಿದೆ.
ಪಾಕಿಸ್ತಾನ ಮತ್ತು ಭಾರತದ ನಡುವೆ ಗಡಿ ಬಂದ್ ಆಗಿರುವುದರಿಂದ ಪಾಕಿಸ್ತಾನಕ್ಕೆ ದೊಡ್ಡ ಮಟ್ಟದಲ್ಲಿ ತೊಂದರೆಯಾಗುತ್ತಿದೆ. ಆದರೆ ಭಾರತಕ್ಕೂ ಕೆಲವೊಂದು ಸಣ್ಣ ಪುಟ್ಟ ಸಮಸ್ಯೆಗಳಾಗಲಿದೆ. ಈ ವಸ್ತುಗಳಿಗೆ ಪರ್ಯಾಯ ಮೂಲಗಳನ್ನು ಹುಡುಕುವವರೆಗೆ ಬೆಲೆ ಏರಿಕೆಯಾಗಲಿದೆ.