Select Your Language

Notifications

webdunia
webdunia
webdunia
webdunia

ಭಾರತದಲ್ಲಿ ವಾಡಿಕೆಗಿಂದ ಅಧಿಕ ಮಳೆ: ಮುಂಗಾರು ಪ್ರವೇಶದ ಬಗ್ಗೆ ಹವಾಮಾನ ಇಲಾಖೆ ಹೇಳಿದ್ದೇನು

India Meteorological Department, Southwest Monsoon arrival, agricultural activity

Sampriya

ನವದೆಹಲಿ , ಮಂಗಳವಾರ, 15 ಏಪ್ರಿಲ್ 2025 (20:48 IST)
Photo Courtesy X
ನವದೆಹಲಿ: ಭಾರತ ಹವಾಮಾನ ಇಲಾಖೆಯು ಕೃಷಿಕರಿಗೆ ಗುಡ್‌ನ್ಯೂಸ್‌ ನೀಡಿದೆ. ಭಾರತದಲ್ಲಿ ಈ ಬಾರಿ ವಾಡಿಕೆಗಿಂತ ಸಾಮಾನ್ಯಕ್ಕಿಂತ ಹೆಚ್ಚಿನ ಮಳೆಯಾಗುವ ನಿರೀಕ್ಷೆಯಿದೆ ಎಂದು ಹೇಳಿದೆ.

ಈ ವರ್ಷದ ಮಾನ್ಸೂನ್ ಋತುವಿನಲ್ಲಿ ಭಾರತದಲ್ಲಿ ಸಾಮಾನ್ಯಕ್ಕಿಂತ ಹೆಚ್ಚಿನ ಮಳೆಯಾಗುವ ನಿರೀಕ್ಷೆಯಿದೆ. ಭಾರತ ಹವಾಮಾನ ಇಲಾಖೆ ದೀರ್ಘಾವಧಿಯ ಸರಾಸರಿಯ ಶೇ 105 ಕಾಲೋಚಿತ ಮಳೆಯಾಗುವ ಮುನ್ಸೂಚನೆ ನೀಡಿದೆ.

ನೈಋತ್ಯ ಮುಂಗಾರು ಸಾಮಾನ್ಯವಾಗಿ ಜೂನ್ 1ರ ಸುಮಾರಿಗೆ ಕೇರಳಕ್ಕೆ ಪ್ರವೇಶಿಸಲು ಆರಂಭಿಸುತ್ತದೆ, ಸೆಪ್ಟೆಂಬರ್ ಮಧ್ಯದ ವೇಳೆಗೆ ಹಿಂದೆ ಸರಿಯುತ್ತದೆ. ಅಂದಾಜು ಸರಾಸರಿಗಿಂತ ಹೆಚ್ಚಿನ ಮಳೆಯು ಕೃಷಿ ವಲಯಕ್ಕೆ ಅನುಕೂಲಕರ ವಾತಾವರಣವನ್ನು ಒದಗಿಸಬಹುದು ಎಂದು ಭೂ ವಿಜ್ಞಾನ ಸಚಿವಾಲಯ ತಿಳಿಸಿದೆ.

ಈ ವರ್ಷದ ಮುನ್ಸೂಚನೆಯು ಕೆಲವು ಪ್ರದೇಶಗಳನ್ನು ಹೊರತುಪಡಿಸಿ ದೇಶದ ಹೆಚ್ಚಿನ ಭಾಗಗಳಲ್ಲಿ ಅನುಕೂಲಕರ ಮಳೆಯ ಪರಿಸ್ಥಿತಿ ನಿರ್ಮಾಣವಾಗಲಿದೆ. 4 ತಿಂಗಳ ಮಾನ್ಸೂನ್ ಋತುವಿನಲ್ಲಿ ಲಡಾಖ್, ಈಶಾನ್ಯ ಭಾರತ ಮತ್ತು ತಮಿಳುನಾಡಿನಲ್ಲಿ ಸಾಮಾನ್ಯಕ್ಕಿಂತ ಕಡಿಮೆ ಮಳೆಯಾಗುವ ನಿರೀಕ್ಷೆಯಿದೆ ಎಂದು ಮಾಹಿತಿ ನೀಡಿದೆ.

4 ತಿಂಗಳ ಮಾನ್ಸೂನ್ ಋತುವಿನಲ್ಲಿ (ಜೂನ್ ತಿಂಗಳಿಂದ ಸೆಪ್ಟೆಂಬರ್) ಭಾರತದಲ್ಲಿ ಸಾಮಾನ್ಯಕ್ಕಿಂತ ಹೆಚ್ಚಿನ ಮಳೆಯಾಗುವ ಸಾಧ್ಯತೆಯಿದೆ. ದೀರ್ಘಾವಧಿಯ ಸರಾಸರಿ 87 ಸೆಂ.ಮೀ.ನಷ್ಟು ಸಂಚಿತ ಮಳೆಯಾಗುವ ಅಂದಾಜು ಮಾಡಲಾಗಿದೆ ಎಂದು ಹೇಳಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಜಾತಿಗಣತಿ ಮೂಲಕ ಹಿಂದೂ, ಮುಸ್ಲಿಮರನ್ನು ಒಡೆಯಲಾಗುತ್ತಿದೆ: ಬಿವೈ ವಿಜಯೇಂದ್ರ