ದೇಶದಲ್ಲಿ ಕೊರೊನಾ ಸೋಂಕು ಪ್ರಕರಣಗಳಲ್ಲಿ ಇಳಿಕೆ ಕಂಡು ಬಂದಿದ್ದು, ಕಳೆದ 24 ಗಂಟೆಯಲ್ಲಿ 25,467 ಸೋಂಕು ಪ್ರಕರಣಗಳು ದೃಢಪಟ್ಟಿದ್ದು, 354 ಮಂದಿ ಮೃತಪಟ್ಟಿದ್ದಾರೆ.
ಕೇಂದ್ರ ಆರೋಗ್ಯ ಸಚಿವಾಲಯ ಮಂಗಳವಾರ ಬಿಡುಗಡೆ ಮಾಡಿದ ಮಾಹಿತಿ ಪ್ರಕಾರ ದೇಶದಲ್ಲಿ ಒಟ್ಟಾರೆ ಸೋಂಕಿತರ ಸಂಖ್ಯೆ 3,24,74,773ಕ್ಕೆ ಏರಿಕೆಯಾದರೆ, ಸಾವಿನ ಸಂಖ್ಯೆ 4,35,110ಕ್ಕೆ ಜಿಗಿತ ಕಂಡಿದೆ.
ಒಂದು ದಿನದಲ್ಲಿ 39,486 ಸೋಂಕಿತರು ಗುಣಮುಖಿತರಾಗಿದ್ದು, ಒಟ್ಟಾರೆ ಗುಣಮುಖಿತರ ಸಂಖ್ಯೆ 3,17,20,112ಕ್ಕೆ ಏರಿಕೆಯಾಗಿದೆ. ಇದರಿಂದ ಸಕ್ರಿಯ ಪ್ರಕರಣಗಳ ಸಂಖ್ಯೆ 3,19,551ಕ್ಕೆ ಇಳಿಕೆಯಾಗಿದೆ.
ಸೂಕ್ತ ಸಂಗಾತಿ ಬೇಕಾ? ಕನ್ನಡ ಮ್ಯಾಟ್ರಿಮೊನಿಯಲ್ಲಿ - ನೋಂದಣಿ ಉಚಿತ!