Webdunia - Bharat's app for daily news and videos

Install App

India Summer: ಈ ರಾಜ್ಯಗಳಲ್ಲಿ ಮುಂದಿನ 6ದಿನ ಬಿಸಿಗಾಳಿ ಎಚ್ಚರಿಕೆ

Sampriya
ಶುಕ್ರವಾರ, 4 ಏಪ್ರಿಲ್ 2025 (17:57 IST)
Photo Courtesy X
ನವದೆಹಲಿ: ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ಪ್ರಕಾರ ಮುಂದಿನ ಆರು ದಿನಗಳಲ್ಲಿ ವಾಯುವ್ಯ ಭಾರತವು ಬೀಸಿಗಾಳಿ ಪರಿಸ್ಥಿತಿ ಉದ್ಭವಿಸುವ ಸಾದ್ಯತೆಯಿದೆ ಎಂದು ಎಚ್ಚರಿಕೆ ನೀಡಿದೆ, ಇದರಿಂದ ದೆಹಲಿಯಲ್ಲಿ ತಾಪಮಾನವು 42 ಡಿಗ್ರಿ ಸೆಲ್ಸಿಯಸ್‌ಗೆ ತಲುಪುವ ಸಾಧ್ಯತೆಯಿದೆ.

ದಕ್ಷಿಣ ಹರಿಯಾಣ, ದೆಹಲಿ, ಪಶ್ಚಿಮ ಉತ್ತರ ಪ್ರದೇಶ, ಹಿಮಾಚಲ ಪ್ರದೇಶ, ಪಂಜಾಬ್, ಗುಜರಾತ್, ರಾಜಸ್ಥಾನ ಮತ್ತು ಪಶ್ಚಿಮ ಮಧ್ಯಪ್ರದೇಶಗಳಿಗೆ ಬಿಸಿಗಾಳಿಯ ಎಚ್ಚರಿಕೆ ನೀಡಲಾಗಿದೆ.

ಮಧ್ಯ ಮತ್ತು ವಾಯುವ್ಯ ಭಾರತದ ಹಲವು ಭಾಗಗಳಲ್ಲಿ ಗರಿಷ್ಠ ತಾಪಮಾನವು 2 ರಿಂದ 4 ಡಿಗ್ರಿ ಸೆಲ್ಸಿಯಸ್‌ ಏರಿಕೆಯಾಗುವ ನಿರೀಕ್ಷೆಯಿದೆ ಎಂದು ಐಎಂಡಿ ತಿಳಿಸಿದೆ.

ಇನ್ನು ದೆಹಲಿಯಲ್ಲಿ ಏಪ್ರಿಲ್ 6 ಅಥವಾ 7ರ ವೇಳೆಗೆ ಕೆಲವು ಸ್ಥಳಗಳಲ್ಲಿ ಹಗಲಿನ ತಾಪಮಾನವು ಸುಮಾರು 42 ಡಿಗ್ರಿ ಸೆಲ್ಸಿಯಸ್‌ಗೆ ತಲುಪಬಹುದು ಐಎಂಡಿ ಹೇಳಿದೆ.

ಈ ತಿಂಗಳಿನಿಂದ ಭಾರತದಲ್ಲಿ  ಸಾಮಾನ್ಯಕ್ಕಿಂತ ಹೆಚ್ಚಿನ ತಾಪಮಾನ ಕಂಡುಬರುವ ನಿರೀಕ್ಷೆಯಿದೆ. ಮಧ್ಯ ಮತ್ತು ಪೂರ್ವ ಭಾರತ ಹಾಗೂ ವಾಯುವ್ಯ ಬಯಲು ಪ್ರದೇಶಗಳಲ್ಲಿ ಹೆಚ್ಚಿನ ಹೀಟ್ ವೇವ್ ದಿನಗಳು ಕಂಡುಬರುತ್ತವೆ ಎಂದು ಇಲಾಖೆ ತಿಳಿಸಿದೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments