Select Your Language

Notifications

webdunia
webdunia
webdunia
webdunia

ಭಾರತ ಪಾಕಿಸ್ತಾನದಲ್ಲಿ ಕ್ರಿಕೆಟ್ ಆಡೋಲ್ಲ, ಪಾಕ್ ಭಾರತದಲ್ಲಿ ಆಡೋಲ್ಲ: ಅಮಿತ್ ಶಾ

ಭಾರತ ಪಾಕಿಸ್ತಾನದಲ್ಲಿ ಕ್ರಿಕೆಟ್ ಆಡೋಲ್ಲ, ಪಾಕ್ ಭಾರತದಲ್ಲಿ ಆಡೋಲ್ಲ: ಅಮಿತ್ ಶಾ
ಮುಂಬೈ , ಶನಿವಾರ, 17 ಜೂನ್ 2017 (19:33 IST)
ಇಂಗ್ಲೆಂಡ್‌ನಲ್ಲಿ ಚಾಂಪಿಯನ್ಸ್ ಟ್ರೋಫಿಯ ಫೈನಲ್ ಪಂದ್ಯದಲ್ಲಿ ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನದ ವಿರುದ್ಧ ನಾಳೆ ಬಹುನಿರೀಕ್ಷಿತ ಪಂದ್ಯ ನಡೆಯುವ ಒಂದು ದಿನ ಮುಂಚೆ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ, ದ್ವಿಪಕ್ಷೀಯ ಕ್ರಿಕೆಟ್ ಸಂಬಂಧಗಳನ್ನು ತಳ್ಳಿಹಾಕಿದ್ದಾರೆ.
 
ಭಾರತ ಮತ್ತು ಪಾಕಿಸ್ತಾನ ಕ್ರಿಕೆಟ್ ತಂಡಗಳು ಅಂತಾರಾಷ್ಟ್ರೀಯ ಪಂದ್ಯಾವಳಿಗಳಲ್ಲಿ ಪಾಲ್ಗೊಳ್ಳುವುದು ಮುಂದುವರಿಸಲಿವೆ. ಆದರೆ, ಭಾರತದಲ್ಲಿ ಪಾಕಿಸ್ತಾನ ಆಡುವಂತಿಲ್ಲ. ಪಾಕಿಸ್ತಾನದಲ್ಲಿ ಭಾರತ ಆಡುವುದಿಲ್ಲ ಎಂದು ಗುಜರಾತ್ ಕ್ರಿಕೆಟ್ ಅಸೋಸಿಯೇಶನ್ ಅಧ್ಯಕ್ಷರೂ ಆದ ಶಾ ಸ್ಪಷ್ಟಪಡಿಸಿದ್ದಾರೆ.
 
ರಾಜ್ಯದಲ್ಲಿ ಪಕ್ಷದ ಸಂಘಟನೆಯನ್ನು ಬಲಪಡಿಸಲು ಮೂರು ದಿನಗಳ ಭೇಟಿಗಾಗಿ ಮುಂಬೈನಲ್ಲಿರುವ ಶಾ, ಎನ್‌ಡಿಎ ಮೈತ್ರಿಕೂಟದ ರಾಷ್ಟ್ರಪತಿ ಅಭ್ಯರ್ಥಿ ಆಯ್ಕೆ ಅಂತಿಮಗೊಳ್ಳುವ ಮೊದಲು ಬಿಜೆಪಿ ತನ್ನ ಮಿತ್ರರನ್ನು ಭೇಟಿಯಾಗಲಿ ಎಂದು ಶಿವಸೇನಾ ಮುಖ್ಯಸ್ಥ ಉದ್ಧವ್ ಠಾಕ್ರೆ ಹೇಳಿಕೆ ನೀಡಿದ ಹಿನ್ನೆಲೆಯಲ್ಲಿ ಶಾ ಮುಂಬೈಗೆ ಆಗಮಿಸಿದ್ದಾರೆ.
 
ಮಿತ್ರ ಸೇನೆಯ ಬಗ್ಗೆ ಅವರು ಪ್ರಶ್ನೆಗಳಿಗೆ ಪ್ರತಿಕ್ರಿಯಿಸುತ್ತಿದ್ದರು. ಇದು ಬಿಜೆಪಿ ಮತ್ತು ಮೋದಿ ಸರಕಾರವನ್ನು ಟೀಕಿಸುತ್ತಿದೆ ಮತ್ತು ಭಾರತದ ಹಸಿರು ಕ್ರಾಂತಿಯ ಪಿತಾಮಹ ಎನ್ನಲಾದ ಎಂಎಸ್ ಸ್ವಾಮಿನಾಥನ್ ಅವರ ಅಧ್ಯಕ್ಷೀಯ ಆಯ್ಕೆಯಾಗಿ ಇದನ್ನು ಸೂಚಿಸಿದ್ದಾರೆ.
 
ಬಿಜೆಪಿ ಮತ್ತು ಮೋದಿ ಸರಕಾರವನ್ನು ಪದೇ ಪದೇ ಟೀಕಿಸುತ್ತಿರುವ ಮಿತ್ರಪಕ್ಷವಾದ ಶಿವಸೇನೆ, ದೇಶದ ಹಸಿರು ಕ್ರಾಂತಿಯ ಪಿತಾಮಹ ಎಂದು ಕರೆಯಲಾಗುವ ಎಂ.ಎಸ್.ಸ್ವಾಮಿನಾಥನ್ ಅವರ ಹೆಸರನ್ನು ರಾಷ್ಟ್ರಪತಿ ಅಭ್ಯರ್ಥಿ ಸ್ಥಾನಕ್ಕಾಗಿ ಸೂಚಿಸಿದೆ. 
 
ಶಿವಸೇನೆಯೊಂದಿಗಿನ ಮೈತ್ರಿಗೆ ಧಕ್ಕೆಯಾದಲ್ಲಿ ಯಾವುದೇ ಕ್ಷಣದಲ್ಲಿ ಎದುರಾಗುವ ಚುನಾವಣೆಗೆ ಬಿಜೆಪಿ ಸಿದ್ದವಿದೆ ಎಂದು ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಹೇಳಿಕೆ ನೀಡಿರುವ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, ಒಂದು ವೇಳೆ ಮಧ್ಯಂತರ ಚುನಾವಣೆ ಎದುರಾದಲ್ಲಿ ಚುನಾವಣೆ ಎದುರಿಸಲು ಸಿದ್ದರಿದ್ದೇವೆ ಎಂದು ಹೇಳಿರುವುದಾಗಿ ತಿಳಿಸಿದ್ದಾರೆ. 
 
ಸ್ವಾತಂತ್ರ್ಯಾನಂತರ ನರೇಂದ್ರ ಮೋದಿ ಅವರನ್ನು ಅತ್ಯಂತ ಜನಪ್ರಿಯ ನಾಯಕ ಎಂದು ಕರೆದ ಅವರು, 2022 ರ ವೇಳೆಗೆ ಭಾರತವು 75 ವರ್ಷಗಳ ಸ್ವಾತಂತ್ರ್ಯವನ್ನು ಆಚರಿಸುವಾಗ ಭಾರತವನ್ನು ವಿಶ್ವ ಶಕ್ತಿಯನ್ನಾಗಿ ಮಾರ್ಪಡಿಸುವ ಎಲ್ಲಾ ಪ್ರಯತ್ನಗಳನ್ನು ಪ್ರಧಾನಿ ಮಾಡುತ್ತಿದ್ದಾರೆ ಎಂದು ಷಾ ಹೇಳಿದರು.
 
ಪ್ರಧಾನಿ ಮೋದಿ ನಾಯಕತ್ವದಲ್ಲಿ ವಿಶ್ವದ ಅತಿ ವೇಗದಲ್ಲಿ ಬೃಹತ್ ಆರ್ಥಿಕತೆ ಹೊಂದುತ್ತಿರುವ ರಾಷ್ಟ್ರವಾಗಿದೆ. ಮೋದಿಯವರು ಪ್ರಧಾನಿ ಕಚೇರಿಯ ಘನತೆಯನ್ನು ಉಳಿಸಿದ್ದಾರೆ ಎಂದು ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ತಿಳಿಸಿದ್ದಾರೆ.

ವೆಬ್ ದುನಿಯಾ ಫ್ಯಾಂಟಸಿ ಕ್ರಿಕೆಟ್ ಲೀಗ್: ಆಡಿ 2.5 ಲಕ್ಷ ರೂ. ಮೌಲ್ಯದ ಬಹುಮಾನ ಗೆಲ್ಲಿ.. ವೆಬ್ ದುನಿಯಾ ಫ್ಯಾಂಟಸಿ ಲೀಗ್`ನಲ್ಲಿ ಭಾಗವಹಿಸಲು ಈ ಲಿಂಕ್ ಕ್ಲಿಕ್ ಮಾಡಿ..
 
http://kannada.fantasycricket.webdunia.com/

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

Share this Story:

Follow Webdunia kannada

ಮುಂದಿನ ಸುದ್ದಿ

ಶಾಲಾ ಶುಲ್ಕ ನೀಡದಿದ್ದರಿಂದ ಇಬ್ಬರು ವಿದ್ಯಾರ್ಥಿನಿಯರನ್ನು ನಗ್ನಗೊಳಿಸಿದ ಶಾಲಾ ಶಿಕ್ಷಕಿ