ಜಮ್ಮು ಕಾಶ್ಮೀರ: ಪಹಲ್ಗಾಮ್ ನಲ್ಲಿ ಉಗ್ರ ದಾಳಿ ಬಳಿಕ ಭಾರತ ಮತ್ತು ಪಾಕಿಸ್ತಾನ ನಡುವೆ ಉದ್ವಿಗ್ನ ವಾತಾವರಣ ಉಂಟಾಗಿದ್ದು ಗುಡಿಯಲ್ಲಿ ಪಾಕ್ ಸೇನೆ ಅಪ್ರಚೋದಿತ ಗುಂಡಿನ ದಾಳಿ ನಡೆಸಿದೆ. ಇದಕ್ಕೆ ತಿರುಗೇಟು ನೀಡಿರುವ ಭಾರತೀಯ ಸೇನೆ 2-3 ಪಾಕ್ ಸೈನಿಕರನ್ನು ಕೊಂದು ಹಾಕಿದೆ.
ಮೊನ್ನೆಯಷ್ಟೇ ಪೆಹಲ್ಗಾಮ್ ನಲ್ಲಿ ಪಾಕ್ ಪ್ರೇರಿತ ಉಗ್ರರು ಭಾರತದ ಪ್ರವಾಸಿಗರ ಮೇಲೆ ಗುಂಡಿನ ದಾಳಿ ನಡೆಸಿ 26 ಜನರ ಸಾವಿಗೆ ಕಾರಣರಾಗಿದ್ದರು. ಇದರ ಬೆನ್ನಲ್ಲೇ ಪಾಕಿಸ್ತಾನ ವಿರುದ್ಧ ಭಾರತ ಕೆಲವು ಕಟ್ಟನಿಟ್ಟಿನ ಕ್ರಮಗಳನ್ನು ಕೈಗೊಂಡಿತ್ತು. ಸಿಂಧೂ ನದಿ ಒಪ್ಪಂದ ರದ್ದು, ಪಾಕ್ ಪ್ರಜೆಗಳ ವೀಸಾ ರದ್ದು ಸೇರಿದಂತೆ ಪ್ರಮುಖ ನಿರ್ಧಾರಗಳನ್ನು ಕೈಗೊಂಡಿದೆ.
ಇದರ ಬೆನ್ನಲ್ಲೇ ಇದೀಗ ಪಾಕಿಸ್ತಾನ ಕೂಡಾ ಉಭಯ ದೇಶಗಳ ನಡುವೆ ಶಾಂತಿ ಕಾಪಾಡಿಕೊಳ್ಳುವ ಶಿಮ್ಲಾ ಒಪ್ಪಂದವನ್ನು ರದ್ದುಗೊಳಿಸಿದೆ. ಇದರ ಬೆನ್ನಲ್ಲೇ ಪಾಕಿಸ್ತಾನ ಸೇನೆ ಗಡಿ ಭಾಗದಲ್ಲಿ ಗುಂಡಿನ ದಾಳಿ ನಡೆಸಿದೆ.
ಇದನ್ನು ಭಾರತೀಯ ಯೋಧರು ಸಮರ್ಥವಾಗಿ ಹಿಮ್ಮೆಟ್ಟಿಸಿದ್ದಾರೆ. ಸುಮಾರು 3 ಗಂಟೆಗಳ ಕಾಲ ಗುಂಡಿನ ಚಕಮಕಿ ನಡೆದಿದೆ ಎನ್ನಲಾಗಿದೆ. ಸ್ಥಳೀಯರು ಹೇಳುವ ಪ್ರಕಾರ ಎರಡಿಂದ ಮೂರು ಪಾಕ್ ಸೈನಿಕರು ದಾಳಿಯಲ್ಲಿ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.