Select Your Language

Notifications

webdunia
webdunia
webdunia
webdunia

ಭಾರತೀಯ ಸೇನಾ ದಾಳಿ: ಪ್ರಧಾನಿ ಮೋದಿ ಕ್ರಮಕ್ಕೆ ಸೋನಿಯಾ ಗಾಂಧಿ ಶ್ಲಾಘನೆ

ಭಾರತೀಯ ಸೇನಾ ದಾಳಿ: ಪ್ರಧಾನಿ ಮೋದಿ ಕ್ರಮಕ್ಕೆ ಸೋನಿಯಾ ಗಾಂಧಿ ಶ್ಲಾಘನೆ
ನವದೆಹಲಿ , ಗುರುವಾರ, 29 ಸೆಪ್ಟಂಬರ್ 2016 (16:22 IST)
ಪಾಕ್ ಆಕ್ರಮಿತ ಕಾಶ್ಮಿರದಲ್ಲಿರುವ ಉಗ್ರರ ಶಿಬಿರಗಳ ಮೇಲೆ ನಡೆದ ಸೀಮಿತ ದಾಳಿ ಕುರಿತಂತೆ ಪ್ರಧಾನಿ ಮೋದಿ ತೆಗೆದುಕೊಂಡ ನಿರ್ಧಾರಕ್ಕೆ ಕಾಂಗ್ರೆಸ್ ಪಕ್ಷದ ಅಧಿನಾಯಕಿ ಸೋನಿಯಾ ಗಾಂಧಿ ಬೆಂಬಲ ಸೂಚಿಸಿದ್ದಾರೆ.
 
ದೇಶದ ಭದ್ರತೆಯ ವಿಷಯದಲ್ಲಿ ಯಾವುದೇ ರಾಜಿಯಿಲ್ಲ. ಪ್ರಧಾನಿ ಮೋದಿ ತೆಗೆದುಕೊಂಡ ನಿರ್ಧಾರ ಸೂಕ್ತವಾಗಿದೆ ಎಂದು ತಿಳಿಸಿದ್ದಾರೆ. ಇಂದು ನಡೆಯಲಿರುವ ಸರ್ವಪಕ್ಷ ಸಭೆಯಲ್ಲಿ ಪಾಲ್ಗೊಂಡು ಸರಕಾರಕ್ಕೆ ಅಭಿನಂದನೆ ಸಲ್ಲಿಸುವುದಾಗಿ ಮಾಹಿತಿ ನೀಡಿದ್ದಾರೆ.
 
ಗಡಿಯೊಳಗೆ ನುಸುಳಲು ಗಡಿರೇಖೆಯ ಬಳಿ ಉಗ್ರರು ಅವಿತಿದ್ದಾರೆ ಎನ್ನುವ ಖಚಿತ ಮಾಹಿತಿ ಪಡೆದು ಉಗ್ರರ ನೆಲೆಗಳ ಮೇಲೆ ದಾಳಿ ನಡೆಸಲಾಗಿತ್ತು. ದಾಳಿಯಲ್ಲಿ ಉಗ್ರರ ಬೆಂಬಲಿಗರು ಹತರಾಗಿದ್ದಾರೆ. ಭಾರತೀಯ ಸೇನಾ ಪಡೆಗಳಲ್ಲಿ ಯಾವುದೇ ಸಾವು-ನೋವು ಉಂಟಾಗಿಲ್ಲ ಎಂದು ತಿಳಿಸಿದ್ದಾರೆ.
 
ಭಾರತದ ಗಡಿಯೊಳಗೆ ನುಸುಳುವ ಎಲ್ಲಾ ಉಗ್ರರನ್ನು ಹತ್ಯೆ ಮಾಡಲಾಗುವುದು ಭಾರತ ವಿರೋಧಿ ಕೃತ್ಯವನ್ನು ಸೇನೆ ಸಹಿಸುವುದಿಲ್ಲ. ಅಕ್ರಮ ನುಸುಳುವಿಕೆಯಂತಹ  ಘಟನೆಗಳು ನಡೆದರೆ ಖಂಡಿತಾ ಕಠಿಣ ಕ್ರಮ ಕೈಗೊಳ್ಳುತ್ತೇವೆ ಎಂದು ಹೇಳಿದ್ದಾರೆ.
 
ಪಾಕ್ ಆಕ್ರಮಿತ ಕಾಶ್ಮಿರ ಪ್ರದೇಶದ ಖೇಲ್ ಮತ್ತು ಭೀಮ್‌ಭರ್ ಪ್ರದೇಶಗಳಲ್ಲಿ ಉಗ್ರರು ಅಡಗಿದ್ದ ಪ್ರದೇಶಗಳ ಮೇಲೆ ದಾಳಿ ನಡೆಸಿದ ಸೇನಾಪಡೆಗಳು ಆರು ಉಗ್ರರ ಕ್ಯಾಂಪ್‌ಗಳ ಮೇಲೆ ದಾಳಿ ನಡೆಸಿ ಉಗ್ರರನ್ನು ಹೆಡೆಮುರಿಕಟ್ಟಿವೆ. 
 
ರಾಷ್ಟ್ರೀಯ ಭಧ್ರತಾ ಸಲಹೆಗಾರ ಅಜಿತ್ ದೋವಲ್ ನೀಡಿದ ಸಲಹೆ ಮೇರೆಗೆ ಉಗ್ರರ ಶಿಬಿರಗಳ ಮೇಲೆ ದಾಳಿ ನಡೆಸಲಾಗಿದೆ ಎಂದು ಮೂಲಗಳು ತಿಳಿಸಿವೆ.
 
ಕೇಂದ್ರ ರಕ್ಷಣಾ ಸಚಿವ ಮನೋಹರ್ ಪರಿಕ್ಕರ್ ಅವರು, ಅಪ್ರಚೋದಿತ ದಾಳಿಗಳಾದರೆ ಅದಕ್ಕೆ ಸಂಪೂರ್ಣ ಬಲದೊಂದಿಗೆ ಉತ್ತರ ನೀಡಿ ಎಂದು ಸೈನಿಕರಿಗೆ ಹೇಳಿದ್ದರು. ಇದರ  ಬೆನ್ನಲ್ಲೇ ಕಳೆದ ರಾತ್ರಿ ಪಾಕಿಸ್ತಾನಿ ಸೇನೆ ಕದನ ವಿರಾಮ ಉಲ್ಲಂಘನೆ ಮಾಡಿತ್ತು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ 

Share this Story:

Follow Webdunia kannada

ಮುಂದಿನ ಸುದ್ದಿ

ಸೀಮಿತ ದಾಳಿ ನಡೆದಿರುವುದನ್ನು ತಳ್ಳಿ ಹಾಕಿದ ಅಂಜುಬುರುಕ ಪಾಕ್