ಮುಂಬೈ: ಭಾರತ ಕ್ರಿಕೆಟ್ ತಂಡದ ನಾಯಕ, ಹಿಟ್ ಬ್ಯಾಟರ್ ರೋಹಿತ್ ಶರ್ಮಾ ಅವರು ಟೆಸ್ಟ್ ಕ್ರಿಕೆಟ್‌ಗೆ ವಿದಾಯ ಹೇಳಲಿದ್ದಾರೆ ಎನ್ನಲಾಗಿದೆ.
67 ಟೆಸ್ಟ್ ಪಂದ್ಯಗಳನ್ನು ಆಡಿರುವ 37 ವರ್ಷದ ರೋಹಿತ್ ಅವರ ನಿರ್ಧಾರ ಹಲವರಿಗೆ ಅಚ್ಚರಿ ತರಿಸಿದೆ.
ಈ ಕುರಿತು ಕೆಲ ಮಾಧ್ಯಮಗಳು ವರದಿ ಮಾಡಿವೆ. ಈಗಾಗಲೇ ಅವರು ತಾವು ಕೈಗೊಂಡಿರುವ ನಿರ್ಧಾರದ ಬಗ್ಗೆ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಗೆ ತಿಳಿಸಿದ್ದು, ತಮ್ಮ ನಿರ್ಧಾರದಿಂದ ಹಿಂದೆ ಸರಿಯುವುದಿಲ್ಲ ಎಂದೂ ವಿವರಿಸಿದ್ದಾರೆ ಎಂದು ತಿಳಿದು ಬಂದಿದೆ.
ಮೆಲ್ಬರ್ನ್ ಕ್ರೀಡಾಂಗಣದಲ್ಲಿ ನಡೆದ ಬಾರ್ಡರ್–ಗಾವಸ್ಕರ್ ಟ್ರೋಫಿಯ ನಾಲ್ಕನೇ ಪಂದ್ಯದಲ್ಲಿ ಭಾರತ ತಂಡವು ಅನುಭವಿಸಿದ ಬೃಹತ್ ಸೋಲಿನ ನಂತರ ಈ ನಿರ್ಧಾರ ಹೊರಬಿದ್ದಿದೆ ಎಂದು ಹೇಳಲಾಗಿದೆ.
ಐದು ಟೆಸ್ಟ್ ಪಂದ್ಯಗಳ ಕೊನೆಯ ಪಂದ್ಯ ಸಿಡ್ನಿಯಲ್ಲಿ ನಡೆಯಲಿದ್ದು ಆ ಬಳಿಕ ರೋಹಿತ್ ಟೆಸ್ಟ್ ಕ್ರಿಕೆಟ್‌ಗೆ ವಿದಾಯ ಹೇಳಲಿದ್ದಾರೆ ಎಂದು ವರದಿಯಾಗಿದೆ. ಈ ಟೂರ್ನಿಯಲ್ಲಿ ಭಾರತದ ತಂಡದ ಹೀನಾಯ ಪ್ರದರ್ಶನ ಟೀಕೆಗೆ ಗುರಿಯಾಗಿದೆ. ಅದರ ಬೆನ್ನಲ್ಲೆ ರೋಹಿತ್ ಈ ನಿರ್ಧಾರಕ್ಕೆ ಬಂದಿದ್ದಾರೆ ಎನ್ನಲಾಗಿದೆ.<>