Select Your Language

Notifications

webdunia
webdunia
webdunia
webdunia

ಪರೋಕ್ಷವಾಗಿ ಯಡಿಯೂರಪ್ಪ, ಈಶ್ವರಪ್ಪಗೆ ಪ್ರಧಾನಿ ಮೋದಿ ವಾರ್ನಿಂಗ್

ಪರೋಕ್ಷವಾಗಿ ಯಡಿಯೂರಪ್ಪ, ಈಶ್ವರಪ್ಪಗೆ ಪ್ರಧಾನಿ ಮೋದಿ ವಾರ್ನಿಂಗ್
ನವದೆಹಲಿ , ಶುಕ್ರವಾರ, 31 ಮಾರ್ಚ್ 2017 (17:25 IST)
ಬಿಜೆಪಿ ರಾಜ್ಯ ಘಟಕದಲ್ಲಿ ಒಳಜಗಳಗಳನ್ನು ಕಡಿಮೆ ಮಾಡಿ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಪರೋಕ್ಷವಾಗಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಮತ್ತು ವಿಪಕ್ಷ ನಾಯಕ ಕೆ.ಎಸ್.ಈಶ್ವರಪ್ಪಗೆ ಪರೋಕ್ಷವಾಗಿ ವಾರ್ನಿಂಗ್ ನೀಡಿದ್ದಾರೆ.
 
ದಕ್ಷಿಣ ಭಾರತದ ಬಿಜೆಪಿ ಸಂಸದರ ಸಭೆಯಲ್ಲಿ ಮಾತನಾಡಿದ ಅವರು, ಸಾಮಾಜಿಕ ಅಂತರ್ಜಾಲ ತಾಣವನ್ನು ಸಮರ್ಪಕವಾಗಿ ಬಳಸಿಕೊಳ್ಳಿ. ನೀವು ಮಾಡಿದ ಅಭಿವೃದ್ಧಿ ಕಾರ್ಯಗಳನ್ನು ನಿಮ್ಮ ನಿಮ್ಮ ಕ್ಷೇತ್ರದ ಜನತೆಯೊಂದಿಗೆ ಶೇರು ಮಾಡಿ ಹಂಚಿಕೊಳ್ಳಿ ಎಂದು ಸಲಹೆ ನೀಡಿದ್ದಾರೆ.
 
ಮುಂದಿನ ವರ್ಷದಲ್ಲಿ ರಾಜ್ಯದಲ್ಲಿ ವಿಧಾನಸಭೆಗೆ ಚುನಾವಣೆ ನಡೆಯಲಿರುವ ಹಿನ್ನೆಲೆಯಲ್ಲಿ ಸಿದ್ದತೆಗಳನ್ನು ಆರಂಭಿಸಿ. ಒಳಜಗಳಗಳಿಂದ ಪಕ್ಷಕ್ಕೆ ಕೆಟ್ಟ ಹೆಸರು ಬರುತ್ತದೆ. ಪ್ರತಿಯೊಬ್ಬ ನಾಯಕರು ಬೂತ್ ಮಟ್ಟದಿಂದ ಕಾರ್ಯವನ್ನು ಆರಂಭಿಸಿ ಎಂದು ಕರೆ ನೀಡಿದ್ದಾರೆ.
 
ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಮತ್ತು ವಿಧಾನಪರಿಷತ್ ವಿಪಕ್ಷ ನಾಯಕ ಕೆ.ಎಸ್.ಈಶ್ವರಪ್ಪ ನಡುವಿನ ವೈಮನಸ್ಸು ಇದೀಗ ಪ್ರಧಾನಿ ಮೋದಿಯವರ ಅಂಗಳ ತಲುಪಿದೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

Share this Story:

Follow Webdunia kannada

ಮುಂದಿನ ಸುದ್ದಿ

70 ವಿದ್ಯಾರ್ಥಿಯರ ಬಟ್ಟೆ ಬಿಚ್ಚಿಸಿದ ವಾರ್ಡನ್