ಲಕ್ನೋ : ಗೃಹ ಬಳಕೆಯ ಅಡುಗೆ ಅನಿಲ ಹಾಗೂ ಪೆಟ್ರೋಲ್, ಡೀಸೆಲ್ ದರ ಹೆಚ್ಚಳ ಮಾಡಿರುವ ಕ್ರಮವನ್ನು ಸಮಾಜವಾದಿ ಪಕ್ಷದ ಅಧ್ಯಕ್ಷ ಅಖಿಲೇಶ್ ಯಾದವ್ ಟೀಕಿಸಿ ಟ್ವೀಟ್ ಮಾಡಿದ್ದಾರೆ.
ಪಂಚ ರಾಜ್ಯಗಳಲ್ಲಿ ಚುನಾವಣೆ ಮುಕ್ತಾಯವಾದ ನಂತರ, ಆಡಳಿತಾರೂಢ ಬಿಜೆಪಿ ಸರ್ಕಾರದಿಂದ ಜನರಿಗೆ ಹಣದುಬ್ಬರದ ಮತ್ತೊಂದು ಉಡುಗೊರೆಯಾಗಿದೆ. ಲಕ್ನೋದಲ್ಲಿ ಎಲ್ಪಿಜಿ ಸಿಲಿಂಡರ್ ಸಾವಿರದ ಹತ್ತಿರ ಮತ್ತು ಪಾಟ್ನಾದಲ್ಲಿ ಸಾವಿರಕ್ಕೂ ಹೆಚ್ಚಾಗಿದೆ ಎಂದು ಟ್ವೀಟ್ ಮಾಡಿದ್ದಾರೆ.
137 ದಿನಗಳ ನಂತರ ಪೆಟ್ರೋಲ್, ಡೀಸೆಲ್ ಬೆಲೆಯಲ್ಲಿ ಬಾರಿ ಏರಿಕೆ ಕಂಡಿದೆ. ಮಾರ್ಚ್ 22ರ ಮಧ್ಯರಾತ್ರಿಯಿಂದಲೇ ಪ್ರತಿ ಲೀಟರ್ ಪೆಟ್ರೋಲ್, ಡಿಸೇಲ್ ಬೆಲೆ 80 ಪೈಸೆ ಹೆಚ್ಚಳವಾಗಿದೆ. ಬೆಲೆ ಏರಿಕೆಯಿಂದ ಬೆಂಗಳೂರಿನಲ್ಲಿ ಲೀಟರ್ ಪೆಟ್ರೋಲ್ಗೆ 101.42 ಮತ್ತು ಡೀಸೆಲ್ಗೆ 85.80 ತಲುಪಿದೆ.
ದೆಹಲಿಯಲ್ಲಿ ಪ್ರತಿ ಲೀಟರ್ ಪೆಟ್ರೋಲ್ ದರ 96.21, ಪ್ರತಿ ಲೀಟರ್ ಡೀಸೆಲ್ಗೆ 87.47, ಮುಂಬೈನಲ್ಲಿ ಲೀಟರ್ ಪೆಟ್ರೋಲ್ 110.78, ಡೀಸೆಲ್ 94.94, ಕೋಲ್ಕತ್ತಾದಲ್ಲಿ ಪೆಟ್ರೋಲ್ 102.16 ಮತ್ತು ಡೀಸೆಲ್ 90.62, ಚೆನ್ನೈನಲ್ಲಿ ಪೆಟ್ರೋಲ್ ದರ 102.16, ಡೀಸೆಲ್ ದರ 92.19 ರೂಪಾಯಿಗೆ ಏರಿಕೆಯಾಗಿದೆ.