Select Your Language

Notifications

webdunia
webdunia
webdunia
webdunia

Narayana Murthy: ಬೆಂಗಳೂರಿಗೆ ವಲಸೆ ಬರುವವರ ಸಂಖ್ಯೆ ಹೆಚ್ಚಾಗಲಿದೆ: ನಾರಾಯಣ ಮೂರ್ತಿ ಆತಂಕ

narayana murthy

Krishnaveni K

ಪುಣೆ , ಸೋಮವಾರ, 23 ಡಿಸೆಂಬರ್ 2024 (09:45 IST)
Photo Credit: X
ಪುಣೆ: ಮುಂದಿನ ದಿನಗಳಲ್ಲಿ ಬೆಂಗಳೂರು, ಹೈದರಾಬಾದ್ ಸೇರಿದಂತೆ ಪ್ರಮುಖ ನಗರಗಳಿಗೆ ವಲಸೆ ಬರುವವರ ಸಂಖ್ಯೆ ಹೆಚ್ಚಾಗಬಹುದು. ಇದು ಆತಂಕಕಾರೀ ವಿಚಾರ ಎಂದು ಇನ್ ಫೋಸಿಸ್ ಸಂಸ್ಥಾಪಕ ನಾರಾಯಣ ಮೂರ್ತಿ ಆತಂಕ ವ್ಯಕ್ತಪಡಿಸಿದ್ದಾರೆ.

ಬೆಂಗಳೂರು, ಹೈದರಾಬಾದ್ ಮತ್ತು ಪುಣೆಯಂತಹ ನಗರಗಳಿಗೆ ವಲಸೆ ಬರುವವರ ಸಂಖ್ಯೆ ಮತ್ತಷ್ಟು ಹೆಚ್ಚಾಗಲಿದೆ. ಇದರಿಂದ ಟ್ರಾಫಿಕ್ ಜ್ಯಾಮ್ ನಂತಹ ಸಮಸ್ಯೆ ಮತ್ತಷ್ಟು ಹೆಚ್ಚಾಗಬಹುದು. ಇದರಿಂದ ಈ ನಗರಗಳಲ್ಲಿ ಮಾಲಿನ್ಯ ಪ್ರಮಾಣವೂ ಹೆಚ್ಚಾಗಬಹುದು ಎಂದು ಅವರು ಆತಂಕ ವ್ಯಕ್ತಪಡಿಸಿದ್ದಾರೆ.

ಪುಣೆಯಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು ಭಾರತ ಸೇರಿದಂತೆ ಹಲವು ದೇಶಗಳಲ್ಲಿ ಇತ್ತೀಚೆಗೆ ಹವಾಮಾನ ಬದಲಾವಣೆಯಾಗುತ್ತಿದ್ದು, ಉಷ್ಣಾಂಶದಲ್ಲಿ ತೀವ್ರ ಏರಿಳಿತವಾಗುತ್ತಿದೆ. ಮುಂದಿನ ಎರಡು ದಶಕಗಳಲ್ಲಿ ಇದು ಇನ್ನಷ್ಟು ಹೆಚ್ಚಾಗಬಹುದು. ಇದರಿಂದ ಬೆಂಗಳೂರು, ಹೈದರಾಬಾದ್, ಪುಣೆಯಂತಹ ನಗರಗಳಿಗೆ ವಲಸೆ ಬರುವವರ ಸಂಖ್ಯೆ ಹೆಚ್ಚಾಗಿಸಬಹುದು. ಪರಿಣಾಮ ಈ ನಗರಗಳಲ್ಲಿ ಮಾಲಿನ್ಯ ಪ್ರಮಾಣ ಹೆಚ್ಚಾಗಲಿದೆ. ಹೀಗಾಗಿ ಸರ್ಕಾರಗಳು ವಲಸೆ ಪ್ರಮಾಣ ಕಡಿಮೆ ಮಾಡಲು ಕ್ರಮ ಕೈಗೊಳ್ಳಬೇಕು ಎಂದಿದ್ದಾರೆ.

ಭಾರತದಲ್ಲಿ ವಿಶೇಷವಾಗಿ ಕಾರ್ಪೋರೇಟ್ ಜಗತ್ತು, ಸರ್ಕಾರಗಳು, ರಾಜಕಾರಣಿಗಳು ಒಟ್ಟಾಗಿ ಕೆಲಸ ಮಾಡಿದರೆ ಖಂಡಿತಾ ಮಾಲಿನ್ಯ ನಿಯಂತ್ರಿಸಬಹುದು. ಮುಂದಿನ 20-25 ವರ್ಷಗಳಲ್ಲಿ ನಗರಗಳಿವೆ ವಲಸೆ ಹೋಗುವವರ ಸಂಖ್ಯೆ ಹೆಚ್ಚಾಗುವುದನ್ನು ತಡೆಯಬೇಕು ಎಂದು ಅವರು ಹೇಳಿದ್ದಾರೆ. ಅವರ ಈ ಹೇಳಿಕೆ ಸಾಕಷ್ಟು ಚರ್ಚೆಗೆ ಕಾರಣವಾಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಈ ಕಾಂಗ್ರೆಸ್ ಫೇಕ್ ಗಾಂಧಿಗಳ ಪಕ್ಷ; ರಿಯಲ್ ಗಾಂಧಿ ಕಾಂಗ್ರೆಸ್ ಇದಲ್ಲ: ಛಲವಾದಿ ನಾರಾಯಣಸ್ವಾಮಿ