Select Your Language

Notifications

webdunia
webdunia
webdunia
webdunia

ವಿಚಾರಣೆ : ಹಿಜಾಬ್ ನಿಷೇಧ ಪ್ರಶ್ನಿಸಿದ್ದ ಅರ್ಜಿಗೆ ಸುಪ್ರೀಂ ಸಮ್ಮತಿ!

ವಿಚಾರಣೆ : ಹಿಜಾಬ್ ನಿಷೇಧ ಪ್ರಶ್ನಿಸಿದ್ದ ಅರ್ಜಿಗೆ ಸುಪ್ರೀಂ ಸಮ್ಮತಿ!
ನವದೆಹಲಿ , ಬುಧವಾರ, 27 ಏಪ್ರಿಲ್ 2022 (09:45 IST)
ನವದೆಹಲಿ : ಶಾಲೆಯೊಳಗೆ ಹಿಜಾಬ್ ಧರಿಸಲು ಅನುಮತಿ ನಿರಾಕರಿಸಿದ ಕರ್ನಾಟಕ ಹೈಕೋರ್ಚ್ ತೀರ್ಪು ಪ್ರಶ್ನಿಸಿ ಸಲ್ಲಿಸಲಾಗಿರುವ ಅರ್ಜಿಯನ್ನು ವಿಚಾರಣೆಗೆ ಸ್ವೀಕರಿಸಲು ಸುಪ್ರೀಂಕೋರ್ಚ್ ಸಮ್ಮತಿಸಿದೆ.

ತುರ್ತು ವಿಚಾರಣೆ ಕೋರಿ ಅರ್ಜಿದಾರರ ಪರ ವಕೀಲರು ಮಾಡಿದ ಮನವಿ ಬಗ್ಗೆ ಪ್ರತಿಕ್ರಿಯಿಸಿದ ಮುಖ್ಯ ನ್ಯಾಯಮೂರ್ತಿ ಎನ್.ವಿ.ರಮಣ, ‘ಎರಡು ದಿನ ಕಾಯಿರಿ. ನಿಮ್ಮ ಅರ್ಜಿಯನ್ನು ಲಿಸ್ಟ್ ಮಾಡಲಾಗುವುದು’ ಎಂದು ಭರವಸೆ ನೀಡಿದರು. ನ್ಯಾ.ಕೃಷ್ಣ ಮುರಾರಿ ಮತ್ತು ನ್ಯಾ. ಹಿಮಾ ಕೊಹ್ಲಿ ಪೀಠದಲ್ಲಿನ ಇತರೆ ಇಬ್ಬರು ನ್ಯಾಯಮೂರ್ತಿಗಳಾಗಿದ್ದಾರೆ.

ಹಿಜಾಬ್ ಧಾರಣೆ ಇಸ್ಲಾಂನಲ್ಲಿ ಅತ್ಯಗತ್ಯ ಧಾರ್ಮಿಕ ಆಚರಣೆಗಳ ಭಾಗವಲ್ಲ. ಹೀಗಾಗಿ ಅದನ್ನು ಸಂವಿಧಾನದ 25ನೇ ವಿಧಿಯಡಿ ಪರಿಗಣಿಸಲು ಬರುವುದಿಲ್ಲ ಎಂದು ಹೇಳಿದ್ದ ಕರ್ನಾಟಕ ಹೈಕೋರ್ಚ್, ಶಾಲಾ ಕೊಠಡಿಯೊಳಗೆ ಹಿಜಾಬ್ ಧರಿಸಲು ಅನುಮತಿ ನಿರಾಕರಿಸಿತ್ತು. ಜೊತೆಗೆ ಈ ಬಗ್ಗೆ ಉಡುಪಿ ಪದವಿ ಪೂರ್ವ ಕಾಲೇಜಿನ ಕೆಲ ವಿದ್ಯಾರ್ಥಿನಿಯರು ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿತ್ತು.

ಇದನ್ನು ಸುಪ್ರೀಂಕೋರ್ಚ್ನಲ್ಲಿ ಪ್ರಶ್ನಿಸಿರುವ ಅರ್ಜಿದಾರರು, ‘ಧಾರ್ಮಿಕ ಸ್ವಾತಂತ್ರ್ಯ ಮತ್ತು ಆತ್ಮಸಾಕ್ಷಿಯ ಸ್ವಾತಂತ್ರ್ಯ ಇವೆರಡರ ನಡುವಿನ ವ್ಯತ್ಯಾಸವನ್ನು ಗುರುತಿಸುವಲ್ಲಿ ಕೋರ್ಟು ತಪ್ಪು ಮಾಡಿದೆ. ಈ ಮೂಲಕ ಧರ್ಮವನ್ನು ಪಾಲನೆ ಮಾಡುವವರು, ಆತ್ಮಸಾಕ್ಷಿಯ ಸ್ವಾತಂತ್ರ ಹೊಂದಬೇಕಿಲ್ಲ ಎಂದು ಊಹಿಸಿದೆ.

ಹಿಜಾಬ್ ಧಾರಣೆಯ ಹಕ್ಕು, ಸಂವಿಧಾನದ 21ನೇ ವಿಧಿಯಡಿ ಬರುವ ಖಾಸಗಿತನ ಹಕ್ಕಿನ ವ್ಯಾಪ್ತಿಗೆ ಬರುತ್ತದೆ. ಇದನ್ನು ಪರಿಗಣಿಸುವಲ್ಲಿ ಹೈಕೋರ್ಚ್ ವಿಫಲವಾಗಿದೆ. ಆತ್ಮಸಾಕ್ಷಿಯ ಸ್ವಾತಂತ್ರವು ಖಾಸಗಿತನ ಹಕ್ಕಿನ ಭಾಗ’ ಎಂದು ವಾದಿಸಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಕೋವಿಡ್ ನಿಯಮ ಉಲ್ಲಂಘಿಸಿದ್ರೆ ದಂಡ ಕಟ್ಟಿಟ್ಟ ಬುತ್ತಿ !