Select Your Language

Notifications

webdunia
webdunia
webdunia
webdunia

ಮುಂದಿನ ಪೀಳಿಗೆಗೆ ಸ್ಫೂರ್ತಿ ನೀಡುತ್ತದೆ : ಚಂದ್ರಯಾನ ಯಶಸ್ಸಿಗೆ ರಾಹುಲ್ ಶ್ಲಾಘನೆ

ಮುಂದಿನ ಪೀಳಿಗೆಗೆ ಸ್ಫೂರ್ತಿ ನೀಡುತ್ತದೆ : ಚಂದ್ರಯಾನ ಯಶಸ್ಸಿಗೆ ರಾಹುಲ್ ಶ್ಲಾಘನೆ
ನವದೆಹಲಿ , ಗುರುವಾರ, 24 ಆಗಸ್ಟ್ 2023 (09:37 IST)
ನವದೆಹಲಿ : ಬಹುನಿರೀಕ್ಷಿತ ಚಂದ್ರಯಾನ-3 ಚಂದ್ರನ ಮೇಲೆ ಸುರಕ್ಷಿತವಾಗಿ ಲ್ಯಾಂಡ್ ಆದ ಹಿನ್ನೆಲೆ ರಾಜಕಾರಣಿಗಳು ಸೇರಿದಂತೆ ಗಣ್ಯಾತಿಗಣ್ಯರು ಶುಭಾಶಯಗಳನ್ನು ಕೋರಿದ್ದಾರೆ.

ಅದೇ ರೀತಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಚಂದ್ರಯಾನ-3 ಯಶಸ್ಸಿಗೆ ಸಂತಸ ವ್ಯಕ್ತಪಡಿಸಿದ್ದು, ಟ್ವೀಟ್ ಮೂಲಕ ಅಭಿನಂದನೆಗಳನ್ನು ತಿಳಿಸಿದ್ದಾರೆ.

ಚಂದ್ರಯಾನ-3 ವಿಕ್ರಂ ಲ್ಯಾಂಡರ್ ಯಶಸ್ವಿಯಾಗಿ ಚಂದ್ರನ ಮೇಲೆ ಕಾಲಿಟ್ಟು ಇಡೀ ದೇಶಕ್ಕೆ ಕೀರ್ತಿಯನ್ನು ತಂದಿದೆ. ಈ ಕುರಿತು ರಾಹುಲ್ ಗಾಂಧಿ ಟ್ವೀಟ್ ಮೂಲಕ ಇಸ್ರೋ ಸಂಸ್ಥೆಗೆ ಹಾಗೂ ವಿಜ್ಞಾನಿಗಳಿಗೆ ಶುಭಾಶಯಗಳನ್ನು ಕೋರಿದ್ದಾರೆ.


Share this Story:

Follow Webdunia kannada

ಮುಂದಿನ ಸುದ್ದಿ

ಪ್ರಿಗೋಜಿನ್ ವಿಮಾನ ಅಪಘಾತದಲ್ಲಿ ದುರ್ಮರಣ