ಸುಪ್ರೀಂಕೋರ್ಟ್‌ನ 53ನೇ ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್ ಕುರಿತ ಇಂಟ್ರಸ್ಟಿಂಗ್‌ ಮಾಹಿತಿ

Sampriya
ಸೋಮವಾರ, 24 ನವೆಂಬರ್ 2025 (14:29 IST)
Photo Credit X
ನವದೆಹಲಿ: ಭಾರತದ 53ನೇ ಮುಖ್ಯ ನ್ಯಾಯಮೂರ್ತಿಯಾಗಿ ಇಂದು ಸೂರ್ಯಕಾಂತ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಸರ್ಕಾರಿ ಶಾಲೆಗಳಲ್ಲಿ ಓದಿರುವ ನ್ಯಾ.ಸೂರ್ಯಕಾಂತ್‌ ಅವರ ಬಗ್ಗೆ ಆಸಕ್ತಿದಾಯಕ ಮಾಹಿತಿ ಇಲ್ಲಿದೆ. 

ಹರಿಯಾಣದ ಹಿಸಾರ್‌ನ ಸಾಮಾನ್ಯ ಕೃಷಿ ಕುಟುಂಬದಿಂದ ಬಂದ ಅವರು, ಜಿಲ್ಲಾ ನ್ಯಾಯಾಲಯದ ವಕೀಲರಾಗಿ ವೃತ್ತಿಜೀವನ ಆರಂಭಿಸಿ ಇಂದು ದೇಶದ ಅತ್ಯುನ್ನತ ನ್ಯಾಯಾಂಗ ಹುದ್ದೆಯನ್ನು ಏರಿದ್ದಾರೆ.

1985ರಲ್ಲಿ ಚಂಡೀಗಢಕ್ಕೆ ಸ್ಥಳಾಂತರಗೊಂಡು ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್‌ನಲ್ಲಿ ತಮ್ಮ ಅಭ್ಯಾಸ ಆರಂಭಿಸಿದರು. ತಮ್ಮ ಕಾನೂನು ಪಾಂಡಿತ್ಯದಿಂದಾಗಿ ಅವರು 2000ನೇ ಇಸವಿಯಲ್ಲಿ ಹರಿಯಾಣದ ಅತ್ಯಂತ ಕಿರಿಯ ಅಡ್ವೊಕೇಟ್ ಜನರಲ್ ಎಂಬ ಹೆಗ್ಗಳಿಕೆಗೂ ಪಾತ್ರರಾಗಿದ್ದರು. 

52ನೇ ಸಿಜೆಐ ಆಗಿದ್ದ ಬಿ.ಆರ್. ಗವಾಯ್ ಅವರು ಭಾನುವಾರ ನಿವೃತ್ತರಾಗಿದ್ದಾರೆ. ಅವರ ಸ್ಥಾನಕ್ಕೆ 63 ವರ್ಷದ ನ್ಯಾ.ಸೂರ್ಯ ಕಾಂತ್ ಅವರು ನೇಮಕಗೊಂಡಿದ್ದಾರೆ. ರಾಷ್ಟ್ರಪತಿ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಪ್ರಮಾಣ ವಚನ ಬೋಧಿಸಿದರು. ಸಮಾರಂಭದಲ್ಲಿ ಉಪರಾಷ್ಟ್ರಪತಿ ಸಿಪಿ ರಾಧಾಕೃಷ್ಣನ್, ಪ್ರಧಾನಿ ನರೇಂದ್ರ ಮೋದಿ, ಅಮಿತ್ ಶಾ ಸೇರಿದಂತೆ ಹಿರಿಯ ನಾಯಕರು ಭಾಗವಹಿಸಿದ್ದರು.  

ಸೂರ್ಯಕಾಂತ್ ಅವರು 2019ರ ಮೇ 24ರಂದು ಸುಪ್ರೀಂಕೋರ್ಟ್‌ನ ನ್ಯಾಯಮೂರ್ತಿಯಾಗಿ ನೇಮಕವಾಗಿದ್ದರು. ಹಿಂದಿಯಲ್ಲಿ ಪ್ರಮಾಣ ವಚನ ಸ್ವೀಕರಿಸಿದ ನ್ಯಾಯಮೂರ್ತಿ ಸೂರ್ಯಕಾಂತ್ ಅವರನ್ನು ಕಳೆದ ಅಕ್ಟೋಬರ್ 30ರಂದು ಮುಂದಿನ ಸಿಜೆಐ ಆಗಿ ನೇಮಿಸಲಾಗಿತ್ತು. ಇವರು ಸುಮಾರು 15 ತಿಂಗಳುಗಳ ಕಾಲ ಈ ಹುದ್ದೆಯಲ್ಲಿ ಇರಲಿದ್ದಾರೆ. ಫೆಬ್ರವರಿ 9, 2027ರಂದು ಸೂರ್ಯಕಾಂತ್ ಅವರಿಗೆ 65 ವರ್ಷ ವಯಸ್ಸು ತುಂಬಿದ ಬಳಿಕ ಅಧಿಕಾರದಿಂದ ನಿವೃತ್ತರಾಗಲಿದ್ದಾರೆ.  

ಸೂರ್ಯಕಾಂತ್‌ ಅವರು ತಮ್ಮ ಸೇವಾವಧಿಯಲ್ಲಿ ನ್ಯಾ.ಸೂರ್ಯಕಾಂತ್ ಅವರು ಅನೇಕ ಐತಿಹಾಸಿಕ ತೀರ್ಪುಗಳ ಭಾಗವಾಗಿದ್ದಾರೆ. ಆರ್ಟಿಕಲ್ 370ರ ರದ್ದತಿ, ವಸಾಹತುಶಾಹಿ ಕಾಲದ ದೇಶದ್ರೋಹದ ಕಾನೂನಿನ ಮರುಪರಿಶೀಲನೆ, ಮತ್ತು ಒನ್ ರ‍್ಯಾಂಕ್ ಒನ್ ಪೆನ್ಷನ್ (ಒಆರ್‌ಒಪಿ) ಯೋಜನೆಯ ಸಿಂಧುತ್ವ ಎತ್ತಿಹಿಡಿದ ಪೀಠಗಳಲ್ಲಿ ಇವರು ಪ್ರಮುಖ ಪಾತ್ರ ವಹಿಸಿದ್ದರು. <>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸುಪ್ರೀಂಕೋರ್ಟ್‌ನ 53ನೇ ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್ ಕುರಿತ ಇಂಟ್ರಸ್ಟಿಂಗ್‌ ಮಾಹಿತಿ

ಸಿದ್ದರಾಮಯ್ಯ, ಡಿಕೆಶಿ ಕುರ್ಚಿ ಫೈಟ್ ನಡುವೆ ವೈರಲ್ ಆಗ್ತಿದೆ ಯಡಿಯೂರಪ್ಪ ಹಳೇ ವಿಚಾರ

ಅಯೋಧ್ಯೆ ರಾಮ ಮಂದಿರದಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಐತಿಹಾಸಿಕ ಕಾರ್ಯಕ್ರಮ ನಾಳೆ

ಸಿಎಂ ಸ್ಥಾನ ಬಿಟ್ಟುಕೊಡುವ ಬಗ್ಗೆ ಸಿದ್ದರಾಮಯ್ಯ ಮಹತ್ವದ ಘೋಷಣೆ

ಡಿಕೆ ಶಿವಕುಮಾರ್ ಸಿಎಂ ಸ್ಥಾನ ಕೊಡಬೇಕಾ: ಡಿಕೆಶಿ ಭವಿಷ್ಯದ ಅಂತಿಮ ನಿರ್ಧಾರ ಯಾರದ್ದು ಗೊತ್ತಾ

ಮುಂದಿನ ಸುದ್ದಿ
Show comments